ಬೆಂಗಳೂರು: ಮೆಟ್ರೋ ರೈಲು ನಿಗಮ ನಿಯಮಿತ ವತಿಯಿಂದ ಯೆಲ್ಲೋ ಲೈನ್ ಪ್ರಯಾಣಿಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಇಂದಿನಿಂದ 5ನೇ ಹೊಸ ಮೇಟ್ರೋ ರೈಲು ಸಂಚಾರ ಆರಂಭಿಸಿದೆ.. ಈ ಹೊಸ ರೈಲಿನ ಸೇರ್ಪಡೆಯು ಯೆಲ್ಲೋ ಲೈನ್‌ನಲ್ಲಿ ಮೆಟ್ರೋ ಸಂಚಾರ ಸಾಮರ್ಥ್ಯವನ್ನು ಹೆಚ್ಚಿಸಲಿದೆ. ನಿನ್ನೆಯವರೆಗೂ ಯೆಲ್ಲೋ ಲೈನ್‌ನಲ್ಲಿ ನಾಲ್ಕು ಮೆಟ್ರೋ ರೈಲುಗಳು ಕಾರ್ಯನಿರ್ವಹಿಸುತ್ತಿದ್ದವು.
ಇದೀಗ ಐದನೇ ರೈಲು ಟ್ರ್ಯಾಕ್‌ಗಿಳಿದಿದ್ದು, ಭವಿಷ್ಯದಲ್ಲಿ ಪ್ರಯಾಣಿಕರಿಗೆ ಇನ್ನಷ್ಟು ಸುಗಮ ಮತ್ತು ನಿರಂತರ ಸೇವೆಯನ್ನು ಒದಗಿಸಲು ನೆರವಾಗಲಿದೆ. ಆರ್.ವಿ.ರೋಡ್ ಮತ್ತು ಬೊಮ್ಮಸಂದ್ರ ಕಡೆ ತೆರಳುವ ಮೆಟ್ರೋ ರೈಲು ಇದಾಗಿದೆ. ಯೆಲ್ಲೋ ಲೈನ್‌ನಲ್ಲಿ ಪೀಕ್ ಅವರ್‌ನಲ್ಲಿ ರೈಲುಗಳು ಪ್ರತಿ 15 ನಿಮಿಷಕ್ಕೊಮ್ಮೆ ಸಂಚರಿಸಲಿವೆ.
ಇದರಿಂದ ಪ್ರಯಾಣಿಕರಿಗೆ ಕಡಿಮೆ ಅವಧಿಯಲ್ಲಿ ಸುಗಮ ಮತ್ತು ನಿರಂತರ ಸೇವೆ ನೀಡಲು ಸಹಾಯಕವಾಗಲಿದೆ. ಈ ಬದಲಾವಣೆ ಎಲ್ಲಾ ದಿನಗಳಿಗೆ ಅನ್ವಯವಾಗುತ್ತದೆಯೆಂದು BMRCL ತಿಳಿಸಿದೆ.


