Wednesday, January 28, 2026
16.4 C
Bengaluru
Google search engine
LIVE
ಮನೆ#Exclusive NewsTop Newsಅರವಿಂದ್ ಕೇಜ್ರಿವಾಲ್ ಮನೆ ಮೇಲೆ ಎಸಿಬಿ ದಾಳಿ

ಅರವಿಂದ್ ಕೇಜ್ರಿವಾಲ್ ಮನೆ ಮೇಲೆ ಎಸಿಬಿ ದಾಳಿ

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ನಾಳೆ ಹೊರಬೀಳಲಿದೆ. ಈ ನಡುವೆ, ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಹೈಡ್ರಾಮಾ ನಡೆಯುತ್ತಿದ್ದು, ಬಿಜೆಪಿ ನೀಡಿದ ದೂರಿನ ಆಧಾರದ ಮೇಲೆ ಎಸಿಬಿ ಮಾಜಿ ಸಿಎಂ ಮತ್ತು ಆಮ್ ಆದ್ಮಿ ಪಕ್ಷದ ಸಂಚಾಲಕರಾದ ಅರವಿಂದ್ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ನಡೆಸಿದೆ.

ಕೇಂದ್ರಾಡಳಿತ ಪ್ರದೇಶವಾದ ದೆಹಲಿಯಲ್ಲಿ ಆಪ್​ ನಾಯಕ ಕೇಜ್ರಿವಾಲ್ ಅವರು ಬಿಜೆಪಿ ವಿರುದ್ದ ಆಪರೇಷನ್ ಕಮಲದ ಆರೋಪ ಮಾಡಿದ ನಂತರ ಬಿಜೆಪಿ ಕಾರ್ಯದರ್ಶಿ ವಿಷ್ಣು ಮಿತ್ತಲ್ ಅವರು ನೀಡಿದ ಔಪಚಾರಿಕ ದೂರಿನ ಆಧಾರದ ಮೇಲೆ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಅವರು ದೆಹಲಿ ಪೊಲೀಸರ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ತನಿಖೆ ಮಾಡುವಂತೆ ನಿರ್ದೇಶಿಸಿದರು. ಇದಾದ ನಂತರ ಈ ಬೆಳವಣಿಗೆ ನಡೆದಿದೆ.

70 ವಿಧಾನಸಭಾ ಕ್ಷೇತ್ರವನ್ನು ಹೊಂದಿರುವ ದೆಹಲಿ ಅಸೆಂಬ್ಲಿಯ ಫಲಿತಾಂಶ ನಾಳೆ ಹೊರಬೀಳಲಿದೆ. ಇಂದು, ಎಲ್ಲಾ ಪಕ್ಷದ ಅಭ್ಯರ್ಥಿಗಳ ಜೊತೆ ಮಾಜಿ ಸಿಎಂ ಕೇಜ್ರಿವಾಲ್ ಸಭೆಯನ್ನು ನಡೆಸಿದ್ದರು. ಇದಕ್ಕೂ ಮುನ್ನ, ಬಿಜೆಪಿಯ ವಿರುದ್ದ ಗಂಭೀರ ಆರೋಪವನ್ನು ಮಾಡಿದ್ದರು.

ಬಿಜೆಪಿ 16 ಅಭ್ಯರ್ಥಿಗಳನ್ನು ಸಚಿವರನ್ನಾಗಿ ಮಾಡಲು 15 ಕೋಟಿ ರೂ.ಗಳ ಆಮಿಷ ಒಡ್ಡಿದೆ ಎಂದು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಸಾಮಾಜಿಕ ಜಾಲತಾಣವಾದ ಎಕ್ಸ್​​ನಲ್ಲಿ ಆರೋಪಿಸಿದ್ದಾರೆ.

ಇದಕ್ಕೂ ಮುನ್ನ ಏಳು ಎಎಪಿ ಅಭ್ಯರ್ಥಿಗಳಿಗೆ ಪಕ್ಷ ಬದಲಾಯಿಸಲು ಬಿಜೆಪಿ ತಲಾ 15 ಕೋಟಿ ರೂ.ಗಳನ್ನು ನೀಡಿದೆ ಎಂದು ಎಎಪಿ ಹಿರಿಯ ನಾಯಕ ಹಾಗೂ ಸಂಸದ ಸಂಜಯ್ ಸಿಂಗ್ ಅವರು ಹೇಳಿರುವುದು ಸದ್ಯ ವಿವಾದ ಕೇಂದ್ರ ಬಿಂದುವಾಗಿದೆ. ಇದರೊಂದಿಗೆ ಆಪ್​ ಬುಧವಾರ ಚುನಾವಣೆ ನಡೆದ ನಂತರ, ಅಭ್ಯರ್ಥಿಗಳು ಬಿಜೆಪಿಯಿಂದ ಫೋನ್ ಕರೆಗಳನ್ನು ಸಹ ಸ್ವೀಕರಿಸಿದ್ದಾರೆ. ಆದರೆ ಆ ಹೆಸರುಗಳನ್ನು ನಾನು ಬಹಿರಂಗಪಡಿಸುವುದಿಲ್ಲ ಎನ್ನುವ ಮೂಲಕ ಆರೋಪಿಸಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments