ದೆಹಲಿ : ದೆಹಲಿ ವಿಧಾನಸಭಾ ಚುನಾವಣೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ದೆಹಲಿಗೆ 12 ಸಾವಿರ ಕೋಟಿ ರೂಪಾಯಿಗೂ ಹೆಚ್ಚುಅನುದಾನ ನೀಡಿದ್ದಾರೆ. ಈ ಸಮಯದಲ್ಲಿ ಪ್ರಧಾನಿ ಮೋದಿ ಆಮ್ ಆದ್ಮಿ ಪಕ್ಷದ ವಿರುದ್ಧವಾಗ್ದಾಳಿ ನಡೆಸಿದರು.
ದೆಹಲಿಯ ರೋಹಿಣಿಯಲ್ಲಿ ಆಯೋಜಿಸಿದ್ದ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜಕೀಯ ಪಕ್ಷಗಳ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಆಮ್ ಆದ್ಮಿ ಪಕ್ಷವು, ಕೇಂದ್ರ ಸರ್ಕಾರ ಕೆಲಸ ಮಾಡಲು ಬಿಡುತ್ತಿಲ್ಲ, ಕೇಂದ್ರ ಸರ್ಕಾರವು ಅವರಿಗೆ ಹಣ ನೀಡುವುದಿಲ್ಲ ಎಂದು ಸುಳ್ಳು ಆರೋಪ ಮಾಡುತ್ತಿವೆ ಎಂದರು.
ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷಕ್ಕೆ “ಯಾವುದೇ ಜವಾಬ್ದಾರಿಯನ್ನು ನೀಡಿದರೆ” ಅದು ಜನರಿಗೆ “ಶಿಕ್ಷೆ” ಎಂದು ನರೇಂದ್ರ ಮೋದಿ ಕೆಜ್ರಿವಾಲ್ ವಿರುದ್ದ ಹರಿಹಾಯ್ದರು.


