Wednesday, February 11, 2026
25.7 C
Bengaluru
Google search engine
LIVE
ಮನೆಸಿನಿಮಾಟಾಕ್ಸಿಕ್' ಚಿತ್ರಕ್ಕೆ ಬಿಡದ ಗ್ರಹಣ; ಕ್ರೈಸ್ತ ಒಕ್ಕೂಟದಿಂದ ದೂರು!

ಟಾಕ್ಸಿಕ್’ ಚಿತ್ರಕ್ಕೆ ಬಿಡದ ಗ್ರಹಣ; ಕ್ರೈಸ್ತ ಒಕ್ಕೂಟದಿಂದ ದೂರು!

ನಟ ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರ ಬಿಡುಗಡೆಗೂ ಮುನ್ನವೇ ಸಾಲು ಸಾಲು ವಿವಾದಗಳ ಸುಳಿಗೆ ಸಿಲುಕಿದೆ. ಇತ್ತೀಚೆಗಷ್ಟೇ ಮಹಿಳಾ ಒಕ್ಕೂಟಗಳಿಂದ ವಿರೋಧ ವ್ಯಕ್ತವಾಗಿದ್ದ ಬೆನ್ನಲ್ಲೇ, ಈಗ ರಾಷ್ಟ್ರೀಯ ಕ್ರೈಸ್ತರ ಒಕ್ಕೂಟವು ಚಿತ್ರತಂಡದ ವಿರುದ್ಧ ತಿರುಗಿಬಿದ್ದಿದೆ.

ರಾಷ್ಟ್ರೀಯ ಕ್ರೈಸ್ತರ ಒಕ್ಕೂಟದ ಆಕ್ರೋಶಕ್ಕೆ ಚಿತ್ರದ ಕೆಲವು ದೃಶ್ಯಗಳು ಕಾರಣವಾಗಿವೆ. ಕ್ರೈಸ್ತ ಧರ್ಮದ ಪವಿತ್ರ ದೇವದೂತ ಸಂತ ಮಿಕಯೇಲ್‌ಗೆ ಚಿತ್ರದಲ್ಲಿ ಅಪಮಾನ ಮಾಡಲಾಗಿದೆ ಮತ್ತು ಅವರ ಪ್ರತಿಮೆಯ ಮುಂದೆ ಅಶ್ಲೀಲ ಎನಿಸುವಂತಹ ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ ಎಂದು ಒಕ್ಕೂಟ ಆರೋಪಿಸಿದೆ. ಈ ಸಂಬಂಧ ಒಕ್ಕೂಟದ ಅಧ್ಯಕ್ಷ ಪ್ರದೀಪ್ ಕುಮಾರ್ ಅವರು ಚಲನಚಿತ್ರ ವಾಣಿಜ್ಯ ಮಂಡಳಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಗೃಹ ಸಚಿವರು ಹಾಗೂ ಸೆನ್ಸಾರ್ ಮಂಡಳಿಗೆ ಅಧಿಕೃತ ದೂರು ನೀಡಿದ್ದಾರೆ.

ಈಗಾಗಲೇ ಹರಿದಾಡುತ್ತಿರುವ ಯೂಟ್ಯೂಬ್ ಪೋಸ್ಟ್‌ಗಳನ್ನು ತಕ್ಷಣವೇ ತೆಗೆದುಹಾಕಬೇಕು ಮತ್ತು ಚಿತ್ರೀಕರಿಸಲಾದ ವಿವಾದಾತ್ಮಕ ದೃಶ್ಯಗಳನ್ನು ಸಿನಿಮಾದಿಂದ ಕೈಬಿಡಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ. ಅಷ್ಟೇ ಅಲ್ಲದೆ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಕ್ಕಾಗಿ ಚಿತ್ರತಂಡವು ಕ್ರೈಸ್ತ ಸಮುದಾಯದ ಕ್ಷಮೆಯಾಚಿಸಬೇಕು, ಇಲ್ಲದಿದ್ದರೆ ಕಾನೂನು ಹೋರಾಟ ನಡೆಸುವುದಾಗಿ ಒಕ್ಕೂಟ ಎಚ್ಚರಿಕೆ ನೀಡಿದೆ.

ಇದಕ್ಕೂ ಮೊದಲು, ಚಿತ್ರದ ಟೀಸರ್‌ನಲ್ಲಿರುವ ಕೆಲವು ದೃಶ್ಯಗಳು ಮಹಿಳೆಯರು ಮತ್ತು ಮಕ್ಕಳ ಸಾಮಾಜಿಕ ಸ್ವಾಸ್ಥ್ಯಕ್ಕೆ ಧಕ್ಕೆ ತರುವಂತಿವೆ ಎಂದು ಆರೋಪಿಸಿ ಮಹಿಳಾ ಒಕ್ಕೂಟಗಳು ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದವು. ಈ ಬೆಳವಣಿಗೆಗಳು ‘ಟಾಕ್ಸಿಕ್’ ಚಿತ್ರತಂಡಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿವೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments