ಬೆಂಗಳೂರು: ನಟ ದರ್ಶನ್ ಅಂಡ್ ಗ್ಯಾಂಗ್ ಅನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಬೇಕೆಂದು ಕೋರಿದ್ದ ಅರ್ಜಿಯನ್ನು ಬೆಂಗಳೂರಿನ 64ನೇ ಸಿಸಿಎಚ್ ಕೋರ್ಟ್ ವಜಾ ಮಾಡಿದೆ.
ದರ್ಶನ್ ಅವರ ಕೆಲವು ಬೇಡಿಕೆಗಳನ್ನು ಈಡೇರಿಸಲು ಸಮ್ಮತಿಸಿದ್ದು, ಬಿಗ್ ರಿಲೀಫ್ ದೊರೆತಂತಾಗಿದೆ. A2 ದರ್ಶನ್ ಅನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲು ಸಕಾರಣಗಳಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಅಲ್ಲದೆ, ಕೊಲೆ ಆರೋಪಿ ದರ್ಶನ್ಗೆ ಜೈಲಿನೊಳಗೆ ಓಡಾಡಲು ಅನುಮತಿ ಕೊಟ್ಟಿದೆ.
ಹೆಚ್ಚುವರಿ ದಿಂಬು ಹಾಗೂ ಬೇಡ್ಶೀಟ್ಗಾಗಿ ದರ್ಶನ್ ಮಾಡಿದ್ದ ಮನವಿಯನ್ನು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯ ಪುರಸ್ಕರಿಸಿದೆ. ದರ್ಶನ್ಗೆ ಹೆಚ್ಚುವರಿ ಹಾಸಿಗೆ ಮತ್ತು ದಿಂಬು ನೀಡಲು ಅನುಮತಿ ನೀಡಿದೆ. ಆದರೆ, ಜೈಲಿನ ಕೈಪಿಡಿ ಅನುಸರಿಸಬೇಕು ಎಂದು ನ್ಯಾಯಾಲಯ ಸೂಚನೆ ನೀಡಿದೆ.
ಜೈಲು ನಿಯಮ ಉಲ್ಲಂಘಿಸಿದರೆ ಜೈಲು ಐಜಿಯಿಂದ ಕ್ರಮ ಜರುಗಿಸಬೇಕು. ನಿಯಮ ಉಲ್ಲಂಘಿಸಿದ್ದೇ ಆದಲ್ಲಿ ಬೇರೆ ಜೈಲಿಗೆ ಸ್ಥಳಾಂತರಿಸಲು ಐಜಿ ಕ್ರಮ ಕೈಗೊಳ್ಳಬಹುದು ಎಂದೂ ಆದೇಶದಲ್ಲಿ ನ್ಯಾಯಾಲಯ ತಿಳಿಸಿದೆ.