Wednesday, January 28, 2026
16.4 C
Bengaluru
Google search engine
LIVE
ಮನೆ#Exclusive Newsರಾಬಿನ್ ಉತ್ತಪ್ಪ ಬಂಧನಕ್ಕೆ ಅರೆಸ್ಟ್ ವಾರೆಂಟ್ ಜಾರಿ.....!

ರಾಬಿನ್ ಉತ್ತಪ್ಪ ಬಂಧನಕ್ಕೆ ಅರೆಸ್ಟ್ ವಾರೆಂಟ್ ಜಾರಿ…..!

ಬೆಂಗಳೂರು : ಸರ್ಕಾರಕ್ಕೆ ಹಾಗೂ ಉದ್ಯೋಗಿಗಳಿಗೆ ವಂಚನೆ ಆರೋಪ ಹಿನ್ನೆಲೆಯಲ್ಲಿ ಭಾರತದ ಮಾಜಿ ಕ್ರಿಕೆಟರ್​, ಕನ್ನಡಿಗ ರಾಬಿನ್ ಉತ್ತಪ್ಪ ಅವರನ್ನು ಬಂಧಿಸುವಂತೆ ಪುಲಕೇಶಿನಗರ ಪೊಲೀಸರಿಗೆ ಪತ್ರ ಬರೆಯಲಾಗಿದೆ.

ಸೆಂಚುರಿಸ್ ಲೈಫ್ ಸ್ಟೈಲ್ ಬ್ರಾಂಡ್ ಪ್ರೈವೆಟ್ ಲಿಮಿಟೆಡ್ ಕಂಪನಿಯನ್ನು ಕ್ರಿಕೆಟರ್ ರಾಬಿನ್ ಉತ್ತಪ್ಪ ಅವರು ನಡೆಸುತ್ತಿದ್ದರು. ಈ ಕಂಪನಿಯಲ್ಲಿ ಉದ್ಯೋಗಿಗಳ ಸಂಬಳದಿಂದ ಪಿಎಫ್​ ಹಣವನ್ನು ತಿಂಗಳು ತಿಂಗಳು ಕಡಿತ ಮಾಡಲಾಗುತ್ತಿತ್ತು. ಆದರೆ ಈ ಹಣವನ್ನು ಉದ್ಯೋಗಿಗಳ ಖಾತೆಗೆ ಹಾಕುತ್ತಿರಲಿಲ್ಲ. ಹೀಗೆ ಸುಮಾರು 23 ಲಕ್ಷ ಹಣವನ್ನು ವಂಚನೆ ಮಾಡಿದ್ದಾರೆ ಎಂದು ಹೇಳಲಾಗಿದೆ.

ಈ ಸಂಬಂಧ ರಾಬಿನ್ ಉತ್ತಪ್ಪ ಅವರನ್ನು ಬಂಧಿಸುವಂತೆ ಪುಲಕೇಶಿನಗರದ ಪೊಲೀಸರಿಗೆ ಪಿಎಫ್ಓ ಅಧಿಕಾರಿ ಷಡಾಕ್ಷರಿ ಗೋಪಾಲ ರೆಡ್ಡಿ ಅವರು ಪತ್ರ ಬರೆದಿದ್ದಾರೆ. ಹೀಗಾಗಿ ಪೊಲೀಸರು ರಾಬಿನ್​ ಉತ್ತಪ್ಪರ ವಿಳಾಸ ಹುಡುಕಿಕೊಂಡು ಹೋಗಿದ್ದರು. ಆದರೆ ಆ ವಿಳಾಸದಲ್ಲಿ ಉತ್ತಪ್ಪ ವಾಸವಿಲ್ಲದಿರುವುದು ಗೊತ್ತಾಗಿ ಪೊಲೀಸರು ವಾಪಸ್ ಆಗಿದ್ದಾರೆ. ​

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments