Saturday, August 30, 2025
20.5 C
Bengaluru
Google search engine
LIVE
ಮನೆಜಿಲ್ಲೆಅಯೋಧ್ಯೆಯ ರಾಮಲಲ್ಲಾ ಮೂರ್ತಿ ಕಾರ್ಯ ಪೂರ್ಣಗೊಳಿಸಿದ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್

ಅಯೋಧ್ಯೆಯ ರಾಮಲಲ್ಲಾ ಮೂರ್ತಿ ಕಾರ್ಯ ಪೂರ್ಣಗೊಳಿಸಿದ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್

ಮೈಸೂರು : ಮೈಸೂರಿನ ಅರುಣ್ ಯೋಗಿರಾಜ್ ಕೈಯಲ್ಲಿ ಅಯೋಧ್ಯೆಯ ರಾಮಲಲ್ಲಾ ಮೂರ್ತಿ ಮೂಡಿ ಬಂದಿದೆ. ರಾಮಲಲ್ಲಾ ಮೂರ್ತಿ ಕೆತ್ತನೆ ಕಾರ್ಯ ಪೂರ್ಣಗೊಂಡಿದೆ. ದೇಶದ ಮೂವರು ಪ್ರಖ್ಯಾತ ಶಿಲ್ಪಿಗಳಿಗೆ ಕಾಯಕ ದಕ್ಕಿದ್ದು, ಜನವರಿ 22ರಂದು ರಾಮ್ ಲಲ್ಲಾ ಮೂರ್ತಿ ಲೋಕಾರ್ಪಣೆಯಾಗಲಿದೆ.

ಬೆಂಗಳೂರಿನ ಜಿ.ಎಲ್.ಭಟ್ ಮತ್ತು ರಾಜಸ್ಥಾನದ ಸತ್ಯನಾರಾಯಣ ಪಾಂಡೆ ಕೂಡ ಪ್ರತ್ಯೇಕ ಮೂರ್ತಿ ಕೆತ್ತನೆ ಮಾಡಿದ್ದಾರೆ. ಮೈಸೂರು ಜಿಲ್ಲೆ ಹೆಗ್ಗಡದೇವನಕೋಟೆ ತಾಲೂಕು ಕೃಷ್ಣಶಿಲೆಯಲ್ಲಿ ಮೂರ್ತಿ ನಿರ್ಮಾಣ ಕಾರ್ಯ ಮಾಡಲಾಗಿದ್ದು, ಪ್ರತಿಮೆಯನ್ನು ಪೂರ್ಣಗೊಳಿಸಲು ಆರು ತಿಂಗಳು ತೆಗೆದುಕೊಂಡಿದ್ದಾರೆ.

ರಾಮಲಲ್ಲಾ ಮೂರ್ತಿ ಅಡಿಯಿಂದ ಹಣೆಯವರೆಗೆ 51 ಇಂಚು ಎತ್ತರವಿದ್ದು, ಪ್ರತಿಮೆಯು “ಪ್ರಭಾವಳಿ” ಸೇರಿದಂತೆ ಎಂಟು ಅಡಿ ಎತ್ತರ ಮೂರೂವರೆ ಅಡಿ ಅಗಲ ಹೊಂದಿದೆ.

ಐದು ವರ್ಷದ ಮಗುವಿನಂತೆ ಬಿಲ್ಲು ಮತ್ತು ಬಾಣವನ್ನು ಹಿಡಿದಿರುವ ಭಗವಾನ್ ರಾಮ, ಮೂರು ಪ್ರತಿಮೆಗಳಲ್ಲಿ ಒಂದನ್ನು ಅಯೋಧ್ಯೆಯ ರಾಮಮಂದಿರದಲ್ಲಿ ಅಂತಿಮ ಪ್ರತಿಷ್ಠಾಪನೆ ಮಾಡಲಾಗುತ್ತದೆ ರಾಮಮಂದಿರ ನಿರ್ಮಾಣ ಸಮಿತಿ ಆಯ್ಕೆ ಮಾಡಲಿದ್ದು, ಈ ಪ್ರತಿಮೆ ಅಂತಿಮಗೊಂಡರೆ, ಪ್ರಧಾನಿ ನರೇಂದ್ರ ಮೋದಿ ಅವರಿಂದ ಈ ರಾಮಲಲ್ಲಾ ಮೂರ್ತಿ ಉದ್ಘಾಟನೆಯಾಗಲಿದೆ.

ಉದ್ಘಾಟನೆಗೆ ಆಹ್ವಾನಿಸಲಾದ 2,000 ಗಣ್ಯರಲ್ಲಿ ಅರುಣ್ ಕೂಡ ಒಬ್ಬರಾಗಿದ್ದಾರೆ. ಅರುಣ್ ಎಂಬಿಎ ಪದವೀಧರರಾಗಿದ್ದು, ಐದನೇ ತಲೆಮಾರಿನ ಶಿಲ್ಪಿಯಾಗಿದ್ದಾರೆ. 40 ವರ್ಷದ ಅರುಣ್ 2008ರಲ್ಲಿ ಪ್ರತಿಮೆಗಳನ್ನು ಕೆತ್ತುವ ಸಂಪ್ರದಾಯವನ್ನು ಮುಂದುವರಿಸಿದ್ದಾರೆ. ಈವರೆಗೆ 1,000 ಕ್ಕೂ ಹೆಚ್ಚು ಪ್ರತಿಮೆಗಳನ್ನು ಸಿದ್ಧಪಡಿಸಿದ್ದಾರೆ.

ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಆಗಮಿಸುವಂತೆ ಆಹ್ವಾನ ಪತ್ರಿಕೆಯನ್ನು ನೀಡಲಾಗಿದ್ದು, ಕಾರ್ಯಕ್ರಮಕ್ಕೆ ಆಹ್ವಾನಿತ ಗಣ್ಯರಿಗೆ ಸ್ವಾಗತ ಅಂತ ಪತ್ರದಲ್ಲಿ ಆರಂಭಿಸಲಾಗಿದೆ. ಜೈ ಶ್ರೀರಾಮ್ , ಒಳ್ಳೆಯದಕ್ಕಾಗಿ ಪ್ರಾರ್ಥಿಸಿ, ಪ್ರತಿಯೊಬ್ಬರ ಒಳಿತಿಗಾಗಿ ಹಾರೈಸಿ. ಐತಿಹ್ಯ ಕಾರ್ಯಕ್ರಮದಲ್ಲಿ‌ ಭಾಗಿಯಾಗಲು ನಿಮಗೆ ಸ್ವಾಗತ ವಿಗ್ರಹದ ಪ್ರಾಣಪ್ರತಿಷ್ಠಾಪನೆಗೆ ಸಾಕ್ಷಿಯಾಗಿ. ಶುಕ್ಲ‌ದ್ವಾದಶಿ, ವಿಕ್ರಮ‌ಸಂವತ್ಸರ 2080 ಸೋಮವಾರ 22 ಜನವರಿ 2024 ಕ್ಕೆ ಸ್ವಾಗತ ಎಂದು ಆಹ್ವಾನ ಪತ್ರಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಜನವರಿ.20 ರಂದೇ ಅಯೋಧ್ಯೆ ತಲುಪುವಂತೆ ಆಹ್ವಾನ ಪತ್ರಿಕೆಯಲ್ಲಿ ಮನವಿ ಮಾಡಲಾಗಿದೆ. ಎರಡು ಸಾವಿರ ಗಣ್ಯರಿಗೆ ಮಾತ್ರ ಆಹ್ವಾನ ನೀಡಲಾಗಿದ್ದು ರಾಮ್‌ಲಲ್ಲಾ ಮೂರ್ತಿ ಶಿಲ್ಪಿ ಅರುಣ್ ಯೋಗಿರಾಜ್ ಗೆ ಆಹ್ವಾನಿಸಲಾಗಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments