ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೆಪ್ಟೆಂಬರ್ 15 ರಂದು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ,ಇನ್ನೆರಡು ದಿನಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಘೋಷಿಸಿರುವ ಅರವಿಂದ್ ಕೇಜ್ರಿವಾಲ್.ಮುಂದಿನ ದಿನಗಳಲ್ಲಿ ಎಎಪಿ ಶಾಸಕರ ಜೊತೆ ಸಭೆ ಆಯೋಜಿಸಿ ಆಪ್ ನಾಯಕರೊಬ್ಬರು ಸಿಎಂ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದರು.
ಅಬಕಾರಿ ನೀತಿಯ ಭ್ರಷ್ಟಾಚಾರ ಪ್ರಕರಣದಲ್ಲಿ ಶುಕ್ರವಾರ ತಿಹಾರ್ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಕೇಜ್ರಿವಾಲ್.“ಜನರು ನನಗೆ ಪ್ರಾಮಾಣಿಕತೆಯ ಪ್ರಮಾಣಪತ್ರ ನೀಡಿದ ನಂತರವೇ ನಾನು ಸಿಎಂ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತೇನೆ. ಜೈಲಿನಿಂದ ಹೊರಬಂದ ನಂತರ ಅಗ್ನಿಪರೀಕ್ಷೆಯನ್ನು ಕೊಡಲು ಬಯಸುತ್ತೇನೆ.