ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದ ಅಳಂದ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ಗೆ ಇದೀಗ ಹೊಸ ಹುದ್ದೆ ನೀಡಲಾಗಿದ್ದು ಅವರನ್ನು ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಅಲ್ಲದೇ ಸಂಪುಟ ದರ್ಜೆ ಸ್ಥಾನಮಾನ ಮತ್ತು ಎಲ್ಲಾ ಸೌಲಭ್ಯ ನೀಡವಂತೆ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಫೇ. 1ರಂದು ಬಿ. ಆರ್. ಪಾಟೀಲ್ ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ರಾಜಿನಾಮೆ ನೀಡಿದ್ದರು.


