Tuesday, June 24, 2025
27.5 C
Bengaluru
Google search engine
LIVE
ಮನೆ#Exclusive Newsಡಿಕೆಶಿ ತಗ್ಗಿ-ಬಗ್ಗಿ ನಡೆಯಬೇಕು ಹೇಳಿಕೆಗೆ ಅಶೋಕ್ ಟಾಂಗ್

ಡಿಕೆಶಿ ತಗ್ಗಿ-ಬಗ್ಗಿ ನಡೆಯಬೇಕು ಹೇಳಿಕೆಗೆ ಅಶೋಕ್ ಟಾಂಗ್

ಬೆಂಗಳೂರು: ಅನುದಾನ ಬೇಕಾದರೆ ನನ್ನ ಬಳಿ ತಗ್ಗಿ ಬಗ್ಗಿ ನಡೆಯಬೇಕು ಎಂದು ಡಿಸಿಎಂ ಸಾಹೇಬರ ಲೇಟೆಸ್ಟ್ ನುಡಿ ಮುತ್ತುಗಳು. ಡಿಕೆ ಶಿವಕುಮಾರ್ ಅವರೇ, ನಿಮ್ಮ ಬಳಿ ತಗ್ಗಿ-ಬಗ್ಗಿ ಇರಬೇಕು ಅನ್ನುವುದಕ್ಕೆ ಬೆಂಗಳೂರು ನಗರವನ್ನು ನಿಮ್ಮ ಜಹಗೀರು ಅಂದುಕೊಡಿದ್ದೀರಾ? ಎಂದು ಆರ್. ಅಶೋಕ್ ಕಿಡಿಕಾರಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಅಧಿಕಾರ ಎನ್ನುವುದು ಮತದಾರರು ಕೊಟ್ಟಿರುವ ಭಿಕ್ಷೆ, ಸಂವಿಧಾನ ಕೊಟ್ಟಿರುವ ಜವಾಬ್ದಾರಿಯೇ ಹೊರತು ಪಾಳೆಗಾರಿಕೆ ಅಲ್ಲ. ಪ್ರಜಾಪ್ರಭುತ್ವದಲ್ಲಿ ನಾವು ತಗ್ಗಿ-ಬಗ್ಗಿ ನಡೆಯಬೇಕಿರುವುದು ಮತಭಿಕ್ಷೆ ನೀಡಿರುವ ಮತದಾರ ಪ್ರಭುಗಳಿಗೆ, ಪ್ರಜಾಪ್ರಭುತ್ವ ವ್ಯವಸ್ಥೆ ನೀಡಿರುವ ಸಂವಿಧಾನಕ್ಕೆ ಹೊರತು ಯಾವ ದೊಣ್ಣೆ ನಾಯಕನಿಗೂ ಅಲ್ಲ’ ಎಂದು ಅಶೋಕ್ ತಿರುಗೇಟು ನೀಡಿದ್ದಾರೆ. ಈ ನಿಮ್ಮ ಒಣ ಪ್ರತಿಷ್ಠೆ, ಧಿಮಾಕು, ದರ್ಬಾರು ಎಲ್ಲ ಬಿಟ್ಟು ಜನರ ಸೇವೆ ಮಾಡುವ ಮನೋಭಾವನೆ ಬೆಳೆಸಿಕೊಳ್ಳಿ. ಯಾವುದೇ ಕ್ಷೇತ್ರದ ಬಗ್ಗೆ ತಾರತಮ್ಯ ಮಾಡದೆ ಸಚಿವರಾಗಿ ನಿಮ್ಮ ಕರ್ತವ್ಯ ನಿರ್ವಹಿಸಿ ಎಂದು ಅಶೋಕ್ ಆಗ್ರಹಿಸಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments