ಕಾಪು: ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಉಡುಪಿಯ ಕಾಪು ಹೊಸ ಮಾರಿಗುಡಿ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ
ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಪುನೀತ್ ರಾಜಕುಮಾರ್ ಪತ್ನಿ ಅಶ್ವಿನಿ ಭೇಟಿ ನೀಡಿದ್ದಾರೆ. ಕಾಪು ಮಾರಿಯಮ್ಮನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದ್ದಾರೆ. ಈ ವೇಳೆ, ಸಂಪೂರ್ಣ ಜೀರ್ಣೋದ್ಧಾರವಾಗಿರುವ ದೇಗುಲವನ್ನು ವೀಕ್ಷಣೆ ಮಾಡಿದ್ದಾರೆ. ಬಳಿಕ ನವದುರ್ಗ ಲೇಖನ ಪುಸ್ತಕ ಪಡೆದುಕೊಂಡಿದ್ದಾರೆ. ದೇವಿ ದರ್ಶನದ ಬಳಿಕ ದೇಗುಲದ ಪ್ರಧಾನ ಅರ್ಚಕರು ಪ್ರಸಾದ ನೀಡಿ ಅವರನ್ನು ಗೌರವಿಸಿದ್ದಾರೆ
ಇತ್ತೀಚೆಗೆ ಕಾಪು ಮಾರಿಯಮ್ಮನ ದೇವಸ್ಥಾನಕ್ಕೆ ಪೂಜಾ ಹೆಗ್ಡೆ, ಶಿಲ್ಪಾ ಶೆಟ್ಟಿ, ಕಂಗನಾ ರಣಾವತ್ ಸೇರಿದಂತೆ ಅನೇಕ ಗಣ್ಯರು ಭೇಟಿ ನೀಡಿದ್ದರು