ಬೆಂಗಳೂರು: ಬಹುನಿರೀಕ್ಷಿತ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (402) ಹುದ್ದೆಗಳ ನೇಮಕಾತಿಗೆ ಅಕ್ಟೋಬರ್ 3ರಂದು ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಲಿಖಿತ ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವ್ಯಾಪಕ ಸಿದ್ಧತೆಗಳನ್ನು ಮಾಡಿಕೊಂಡಿದೆ.
ಕಮಾಂಡ್ ಸೆಂಟರ್:
ಬೆಂಗಳೂರಿನ ಕೆಇಎ ಕಚೇರಿಯಲ್ಲಿ ರಾಜ್ಯ ಮಟ್ಟದ ಕಮಾಂಡ್ ಸೆಂಟರ್ ಸ್ಥಾಪಿಸಿ, ಪ್ರತಿಯೊಂದು ಪರೀಕ್ಷಾ ಕೊಠಡಿಯಲ್ಲಿ ಆಗುವ ಬೆಳವಣಿಗೆಗಳನ್ನು ವಿಕ್ಷಿಸಿಸಲು ಟಿವಿಗಳನ್ನು ಅಳವಡಿಸಿದೆ. ಎಲ್ಲಾ ಜಿಲ್ಲೆಗಳಲ್ಲು ಕೂಡ ಒಂದು ನಿಯಂತ್ರಣ ಕೊಠಡಿ ಕಾರ್ಯನಿರ್ವಹಿಸಲಿದೆ ಎಚ್.ಪ್ರಸನ್ನ ಹೆಳಿದ್ದಾರೆ.
ಪ್ರಶ್ನೆ ಪತ್ರಿಕೆ ಸ್ವೀಕಾರ ಮತ್ತು ಅದರ ಬಂಡಲ್ ತೆರೆಯುವ ಎಲ್ಲ ಪ್ರಕ್ರಿಯೆಯನ್ನೂ ವೆಬ್ ಕಾಸ್ಟಿಂಗ್ ಮಾಡಲಾಗುತ್ತದೆ. ಅಲ್ಲದೇ, ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವ ಸಂದರ್ಭದಲ್ಲಿ ಅವರ ಬೆರಳಚ್ಚು ಮತ್ತು ಭಾವಚಿತ್ರವನ್ನು ತೆಗೆದುಕೊಂಡು ಅಲ್ಲೇ ಅದನ್ನು ಅವರು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಲಗತ್ತಿಸಿರುವ ಚಿತ್ರದ ಜತೆಗೂ ಆನ್‌ಲೈನ್‌ನಲ್ಲಿ ಹೊಂದಾಣಿಕೆ ಮಾಡುವ ವ್ಯವಸ್ಥೆ ಮಾಡಲಾಗಿದೆ. ಹೀಗೆ ಮಾಡುವುದರಿಂದ ಯಾರದೊ ಹೆಸರಿನಲ್ಲಿ ಇನ್ಯಾರೊ ಪರೀಕ್ಷೆ ಬರೆಯುವುದನ್ನು ತಡೆಯಬಹುದು ಎಂದು ಹೇಳಿದರು.