ಜಿಲ್ಲೆಸುದ್ದಿಹಣಕಾಸು

ATM ಹಣ ದುರುಪಯೋಗ; ಸಿಎಂಎಸ್ ಕಂಪನಿ ಸಿಬ್ಬಂದಿ ವಿರುದ್ಧ ಎಫ್‌ಐಆರ್

ಹಾಸನ: ಎಟಿಎಂಗಳಿಗೆ ಹಣ ತುಂಬಿಸದೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಆರೋಪದ ಮೇಲೆ ಸಿಎಂಎಸ್ ಕಂಪನಿಯ ಇಬ್ಬರು ಸಿಬ್ಬಂದಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬೂವನಹಳ್ಳಿ ಗ್ರಾಮದ ನಂದೀಶ್ ಬಿ.ಎಲ್. ಮತ್ತು ದಾಸರಕೊಪ್ಪಲಿನ ಮಧುಕುಮಾರ್ ಎಂ.ಪಿ. ಎಂಬುವವರೇ ಆರೋಪಿತರಾಗಿದ್ದು, ಇವರು ಕಂಪನಿಗೆ ಸೇರಬೇಕಾದ ಬರೋಬ್ಬರಿ 3,40,28,200 ರೂಪಾಯಿಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸಿಎಂಎಸ್ ಬ್ರಾಂಚ್ ಮ್ಯಾನೇಜರ್ ನೀಡಿದ ದೂರಿನ ಮೇರೆಗೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಒಟ್ಟು ಹದಿನೈದು ಎಟಿಎಂಗಳಿಗೆ ತುಂಬಿಸಬೇಕಾಗಿದ್ದ ಈ ಮೊತ್ತವನ್ನು ಸಿಬ್ಬಂದಿಗಳು ಬ್ಯಾಂಕ್‌ಗೆ ಜಮೆ ಮಾಡದೆ ಸ್ವಂತಕ್ಕೆ ಬಳಸಿಕೊಂಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಪೊಲೀಸರು ಬಿಎನ್‌ಎಸ್ (BNS) ಸೆಕ್ಷನ್ 316 (4), 318 (4), ಮತ್ತು 3 (5) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Comments (0)

Your email address will not be published. Required fields are marked *

Back to top button