ಬೆಂಗಳೂರು: ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರನಿರತ ಬಿಜೆಪಿ ಕಾರ್ಯಕರ್ತರ ಮೇಲೆ ನಿನ್ನೆ ಹಲ್ಲೆ ಮಾಡಲಾಗಿದೆ ಎಂದು ಬಿಜೆಪಿ ನಿಯೋಗ ದೂರು ನೀಡಿದೆ. ನಿಯೋಗವು ಇಂದು ಈ ಕುರಿತು ನೃಪತುಂಗ ರಸ್ತೆಯಲ್ಲಿರುವ ಚುನಾವಣಾ ಆಯೋಗ ಕಚೇರಿಗೆ ಭೇಟಿ ನೀಡಿ ದೂರು ನೀಡಿದೆ.
ರಾಜ್ಯ ಸರಕಾರವು ಪೊಲೀಸ್ ಇಲಾಖೆಯನ್ನು ತಮ್ಮ ಕಪಿಮುಷ್ಟಿಯಲ್ಲಿ ಇಟ್ಟುಕೊಂಡಿದೆ. ನಮ್ಮ ಕಾರ್ಯಕರ್ತರ ಮೇಲೆ ಕೇಸು ಹಾಕಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಅವರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.
ಸುರಪುರದಲ್ಲಿ ನಮ್ಮ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಕುರಿತು ಮುಖ್ಯ ಚುನಾವಣಾ ಅಧಿಕಾರಿಗಳಿಗೆ ದೂರು ಕೊಡಲಾಗಿದೆ ಎಂದು ತಿಳಿಸಿದರು.ಉತ್ತರ ಕರ್ನಾಟಕದಲ್ಲಿ ಅತಿ ಹೆಚ್ಚು ಬಿಸಿಲು ಇರುವ ಕಾರಣ ಮತದಾನದ ಅವಧಿಯನ್ನು ಸಂಜೆ ಒಂದು ಗಂಟೆ ವಿಸ್ತರಿಸಲು ಕೋರಿದ್ದೇವೆ ಎಂದು ಹೇಳಿದರು. ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರು ಕಾಂಗ್ರೆಸ್ಸಿಗೆ ಮತ ಕೊಡದೆ ಇದ್ದರೆ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಒಬಿಸಿ ಮೀಸಲಾತಿ ಬದಲಾವಣೆ ಕುರಿತು ಮಾತನಾಡಿದ್ದಾರೆ ಎಂದು ಆಕ್ಷೇಪ ಸೂಚಿಸಿದರು. ಈ ದೂರನ್ನು ತಕ್ಷಣ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ ಎಂದು ವಿವರ ನೀಡಿದರು.
ಮನವಿ ಸಲ್ಲಿಸುವ ನಿಯೋಗದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ, ಚುನಾವಣಾ ಕಾನೂನು ಘಟಕದ ರಾಜ್ಯ ಸಹ ಸಂಚಾಲಕ ರಾಜಶೇಖರ, ಕಾನೂನು ಪ್ರಕೋಷ್ಠದ ಬೆಂಗಳೂರು ಉತ್ತರ ಜಿಲ್ಲಾ ಸಂಚಾಲಕ ಯಶವಂತ್ ಮತ್ತು ಪಕ್ಷದ ನಾಯಕರು ಇದ್ದರು.
ಫ್ರೀಡಂ ಟಿವಿಯಲ್ಲಿ ಜಾಹೀರಾತು ನೀಡಲು
ಈ ನಂಬರ್ ಗೆ ಸಂಪರ್ಕಿಸಿ
Phone Number : +91 9164072277
Email id : salesatfreedomtv@gmail.com