#Exclusive NewsTop Newsಸುದ್ದಿ

ನಟ ಸೈಫ್ ಅಲಿಖಾನ್ ಮೇಲೆ ಹಲ್ಲೆ ; ಚಾಕು ಇರಿತದಿಂದ ಹಲ್ಲೆಗೆ ಯತ್ನ ..!

ಮುಂಬೈ : ಸೈಫ್ ಅಲಿ ಖಾನ್ ಅವರ ಮುಂಬೈನ ಮನೆಗೆ ನುಗ್ಗಿದ ದಾಳಿಕೊರರು ಚಾಕುವಿನಿಂದ ಇರಿದಿದ್ದಾರೆ ಎಂದು ಆರೋಪಿಸಲಾಗಿದೆ. ಗುರುವಾರ ಬೆಳಗಿನ ಜಾವ 2.30ರ ಸುಮಾರಿಗೆ ಈ ಘಟನೆ ನಡೆದಿದೆ. ಸದ್ಯ ನಟ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಸೈಫ್​ ಅಲಿಖಾನ್​.

ಪೊಲೀಸರು ತನಿಖೆ ಆರಂಭಿಸಿದ್ದು, ಬಾಂದ್ರಾ ಪೊಲೀಸ್ ಠಾಣೆಯಲ್ಲಿ ದಾಳಿಕೊರರು ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸೈಫ್ ಅಲಿ ಖಾನ್ ಅವರು ಪತ್ನಿ ಕರೀನಾ ಕಪೂರ್ ಮತ್ತು ಮಕ್ಕಳಾದ ತೈಮೂರ್ ಮತ್ತು ಜೆಹ್ ಅವರೊಂದಿಗೆ ಮಲಗಿದ್ದಾಗ ಅನಾಹುತಕಾರಿಯೊಬ್ಬರು ಅವರ ಮನೆಗೆ ನುಸುಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆನ್ನಿನ ಭಾಗದಲ್ಲಿ ಕಳ್ಳರು ಇರಿದ ಚಾಕು ತುಂಬಾನೇ ದೊಡ್ಡ ಗಾಯವನ್ನೇ ಮಾಡಿದೆ ಎನ್ನಲಾಗಿದೆ. ಬೆನ್ನಿನ ಮೂಳೆಗೆ ತೊಂದರೆ ಆಗಿದೆಯೇ ಎನ್ನುವ ಬಗ್ಗೆ ಪರೀಕ್ಷೆ ನಡೆಯುತ್ತಿದೆ. ಸದ್ಯ ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯ ಇದೆ ಎನ್ನಲಾಗಿದೆ.

Comments (0)

Your email address will not be published. Required fields are marked *

Back to top button