ಗುರುವಾರ ಅಣ್ಣಮ್ಮ ಕೂರಿಸೋ ವಿಚಾರದಲ್ಲಿ ಸ್ಥಳೀಯ ಹುಡುಗರೊಂದಿಗೆ ಗಲಾಟೆ ಮಾಡಿಕೊಂಡಿದ್ದ ಜಗದೀಶ್ಗೆ ಅವರೆಲ್ಲರೂ ಸೇರಿಕೊಂಡು ಸರಿಯಾಗಿ ಥಳಿಸಿದ್ದರು. ಈಗ ಮತ್ತೊಮ್ಮೆ ಜಗದೀಶ್ ಮೇಲೆ ಹಲ್ಲೆಯಾಗಿದೆ. ಈ ಬಾರಿ ಹಲ್ಲೆ ಎಷ್ಟು ಗಂಭೀರ ಪ್ರಮಾಣದಲ್ಲಿ ಆಗಿದೆಯೆಂದರೆ, ಅವರ ಮೂಗಿನಿಂದ ರಕ್ತ ಸುರಿಯಲು ಆರಂಭಿಸಿದೆ.
ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿ ಜಗದೀಶ್ ಅವರಿಗೆ ಸೇರಿದ ಕಾಂಪ್ಲೆಕ್ಸ್ ಇದೆ. ಇದೇ ರಸ್ತೆಯಲ್ಲಿ ಅಣ್ಣಮ್ಮ ದೇವಿಯನ್ನು ಕೂರಿಸಿದ್ದನ್ನು ಜಗದೀಶ್ ಪ್ರಶ್ನೆ ಮಾಡಿದ್ದರು. ಆಗ ಜಗದೀಶ್ ಮೇಲೆ ಹಲ್ಲೆಗೆ ಯತ್ನ ನಡೆದಿತ್ತು. ಈ ಘಟನೆ ಸಂಬಂಧ ಪ್ರತಿಕ್ರಿಯಿಸುವಾಗ ಅವರು ಆವಾಜ್ ಹಾಕಿದ್ದರು. ದರ್ಶನ್ ಅಭಿಮಾನಿಗಳನ್ನು ಕೆರಳಿಸುವ ರೀತಿಯಲ್ಲಿ ಮಾತನಾಡಿದ್ದರು. ‘ಈ ಕೆಲಸ ಮಾಡಿದ್ದು ದರ್ಶನ್ ಅಭಿಮಾನಿಗಳಂತೆ. ನನ್ನ ಬಳಿ ಬರುವಾಗ ವಿಮೆ ಮಾಡಿಸಿಕೊಂಡು ಬನ್ನಿ’ ಎಂದಿದ್ದರು.