Sunday, February 15, 2026
20 C
Bengaluru
Google search engine
LIVE
ಮನೆರಾಜ್ಯಕವಿ ಹೆಚ್ ಎಸ್ ವೆಂಕಟೇಶ್ ಮೂರ್ತಿ ಇನ್ನಿಲ್ಲ..!

ಕವಿ ಹೆಚ್ ಎಸ್ ವೆಂಕಟೇಶ್ ಮೂರ್ತಿ ಇನ್ನಿಲ್ಲ..!

ಕನ್ನಡದ ಖ್ಯಾತ ಕವಿ, ನಾಟಕ ರಚನೆಕಾರರು, ಸಾಹಿತಿಯಾಗಿರುವ ಎಚ್‌ ಎಸ್ ವೆಂಕಟೇಶ ಮೂರ್ತಿ ಅವರು ಇಂದು ಬೆಳಿಗ್ಗೆ 7 ಗಂಟೆಗೆ ಬಿಜಿಎಸ್​ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ವೆಂಕಟೇಶ ಮೂರ್ತಿ ಅವರು ಹೆಚ್ಎಸ್‌ವಿ ಅಂತಲೇ ಚಿರಪರಿಚಿತರಾಗಿದ್ದರು. ಅವರು ಅನೇಕ ಚಿತ್ರಗಳಿಗೆ ಹಾಡುಗಳು, ಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ. 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ .

ಎಚ್​ಎಸ್​ವಿ ಅವರು 1944ರ ಜೂನ್ 23ರಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹೊದಿಗೆರೆ ಗ್ರಾಮದಲ್ಲಿ ಜನಿಸಿದರು. ಅವರ ತಂದೆ ನಾರಾಯಣ ಭಟ್ಟರು ಮತ್ತು ತಾಯಿ ನಾಗರತ್ನಮ್ಮ. ಎಚ್‌ಎಸ್‌ವಿ ತಮ್ಮ ಬಾಲ್ಯವನ್ನು ಗ್ರಾಮೀಣ ಪರಿಸರದಲ್ಲಿ ಕಳೆದಿದ್ದಾರೆ.ಇವರು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಬಿಎ ಪದವಿ, ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂಎ ಪದವಿ ಪಡೆದರು. ‘ಕನ್ನಡದಲ್ಲಿ ಕಥನ ಕವನಗಳು’ ಮಹಾಪ್ರಬಂಧವನ್ನು ಮಂಡಿಸಿ ಪಿಎಚ್.ಡಿ. ಪದವಿಯನ್ನು ಪಡೆದರು. 1973ರಲ್ಲಿ ಬೆಂಗಳೂರಿನ ಸೇಂಟ್ ಜೋಸೆಫ್ ವಾಣಿಜ್ಯ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ ನೇಮಕ ಆದರು. 2000ರಲ್ಲಿ ಅವರು ನಿವೃತ್ತಿ ಹೊಂದಿದರು.

ರಾಷ್ಟ್ರಪ್ರಶಸ್ತಿ ವಿಜೇತ ಚಿತ್ರ ‘ಚಿನ್ನಾರಿ ಮುತ್ತ’ಗೆ ಇವರೇ ಕಥೆ, ಸಂಭಾಷಣೆ ಹಾಗೂ ಎಲ್ಲಾ ಹಾಡುಗಳನ್ನು ಬರೆದಿದ್ದರು. ‘ಅಮೆರಿಕ ಅಮೆರಿಕ’ ಚಿತ್ರದ ‘ಬಾನಲ್ಲಿ ಓಡೋ ಮೋಡ..’ ಹಾಡು ಇವರ ಬರಹದಲ್ಲೇ ಮೂಡಿ ಬಂದಿದೆ. ಪುನೀತ್ ನಟನೆಯ ‘ಮೈತ್ರಿ’ ಚಿತ್ರಕ್ಕೆ ಹಾಡು ಬರೆದಿದ್ದರು. ‘ಕಿರಿಕ್ ಪಾರ್ಟಿ’ ಚಿತ್ರದಲ್ಲಿ ಬಳಕೆ ಆದ ‘ತೂಗು ಮಂಚದಲ್ಲಿ ಕೂತು..’ ಇವರೇ ಬರೆದ ಹಾಡು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments