Tuesday, January 27, 2026
24.7 C
Bengaluru
Google search engine
LIVE
ಮನೆ#Exclusive Newsಪ್ರಯಾಣಿಕರಿಗೆ ಆಟೋ ದರ ಏರಿಕೆ ಬಿಸಿ: ಪ್ರತಿ ಕಿಲೋ ಮೀಟರ್ ಗೆ 5 ರೂಪಾಯಿ ಹೆಚ್ಚಳ...

ಪ್ರಯಾಣಿಕರಿಗೆ ಆಟೋ ದರ ಏರಿಕೆ ಬಿಸಿ: ಪ್ರತಿ ಕಿಲೋ ಮೀಟರ್ ಗೆ 5 ರೂಪಾಯಿ ಹೆಚ್ಚಳ ಸಾಧ್ಯತೆ!

ಬೆಂಗಳೂರು: ಹೊಸ ವರ್ಷಕ್ಕೆ ಜನ ಸಾಮಾನ್ಯರಿಗೆ ಆಟೋ ದರ ಏರಿಕೆ ಶಾಕ್ ಸಿಗುವ ಸಾಧ್ಯತೆ ದಟ್ಟವಾಗುತ್ತಿದೆ. ಪ್ರತಿ ಒಂದು ಕಿಲೋ ಮೀಟರ್ ಗೆ 5 ರೂಪಾಯಿವರೆಗೆ ಏರಿಕೆಯಾಗಲಿದೆ ಎಂದು ಹೇಳಲಾಗುತ್ತಿದೆ.

ತೈಲಬೆಲೆ ಏರಿಕೆ, ಬಿಡಿಭಾಗಗಳ ಬೆಲೆ ಏರಿಕೆ, ದೈನಂದಿನ ಪದಾರ್ಥಗಳ ಬೆಲೆ ಏರಿಕೆಯಿಂದಾಗಿ, ಆಟೋ ಮಿನಿಮಮ್ ದರವನ್ನು ಏರಿಸಬೇಕೆಂದು ಆಟೋ ರಿಕ್ಷಾ ಡ್ರೈವರ್ಸ್ ಯೂನಿಯನ್ ಆಗ್ರಹಿಸುತ್ತಿದ್ದಾರೆ.

ಪ್ರತಿ ಒಂದು ಕಿಲೋ ಮೀಟರ್ ದೂರಕ್ಕೆ 15 ರೂಪಾಯಿಂದ 20 ರೂಪಾಯಿಗೆ ಮತ್ತು 2 ಕಿಲೋ ಮೀಟರ್ ದೂರಕ್ಕೆ 30 ರೂಪಾಯಿಯಿಂದ 40 ರೂಪಾಯಿಗೆ ದರ ಪರಿಷ್ಕರಿಸುವಂತೆ ಒತ್ತಾಯಿಸಿದ್ದಾರೆ.

ದರ ಪರಿಷ್ಕರಣೆ ಕುರಿತು ಸೋಮವಾರ ರಾಜ್ಯ ಸಾರಿಗೆ ಇಲಾಖೆ ಹಾಗೂ ಆಟೋ ಯೂನಯನ್ ಗಳು ಸಭೆ ನಡೆಯಬೇಕಿತ್ತು. ಆದರೆ, ಕಾರಣಾಂತರಗಳಿಂದ ಸಭೆಯನ್ನು ಮುಂದೂಡಲಾಗಿದ್ದು, ಪ್ರಯಾಣ ದರ ಹೆಚ್ಚಳ ಬೇಡಿಕೆ ಪರಿಗಣನೆಯಾಗುವ ಸಾಧ್ಯತೆ ಎಂದು ಸಾರಿಗೆ ಇಲಾಖೆ ಮೂಲಗಳಉ ತಿಳಿಸಿವೆ.

ಆದರ್ಶ ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘದ ಅಧ್ಯಕ್ಷ ಎಂ.ಮಂಜುನಾಥ್ ಮಾತನಾಡಿ, ಎಲ್ಲ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಶಾಲಾ ಶುಲ್ಕ, ಆಸ್ಪತ್ರೆ ವೆಚ್ಚ ಹೀಗೆ ಎಲ್ಲದರಲ್ಲೂ ಏರಿಕೆಯಾಗಿದೆ. ಆಟೋ ಚಾಲಕರು ತಮ್ಮ ಕುಟುಂಬವನ್ನು ಹೇಗೆ ನಡೆಸಬೇಕು? ಹಲವಾರು ಚಾಲಕರು ಸಾಲದ ಸುಳಿಯಲ್ಲಿ ಸಿಲುಕಿದ್ದಾರೆ. ಬಡ್ಡಿ ಪಾವತಿಸಲು ಹೆಣಗಾಡುತ್ತಿದ್ದಾರೆ. ಸರ್ಕಾರಿ ಮತ್ತು ಖಾಸಗಿ ಕಂಪನಿಗಳ ನೌಕರರ ವೇತನವನ್ನು ನಿಯಮಿತವಾಗಿ ಪರಿಷ್ಕರಿಸಲಾಗುತ್ತದೆ. ಆಟೋ ಚಾಲಕರು ಕೇವಲ ಮೀಟರ್ ದರವನ್ನು ಅವಲಂಬಿಸಿರುತ್ತಾರೆ. ಹೆಚ್ಚುತ್ತಿರುವ ವೆಚ್ಚಗಳಿಗೆ ಅನುಗುಣವಾಗಿ ದರಗಳ ನಿಯಮಿತ ಪರಿಷ್ಕರಣೆಯನ್ನು ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ.

ಮಂಗಳೂರು, ಉಡುಪಿ ಮತ್ತು ಶಿವಮೊಗ್ಗದಲ್ಲಿ ಆಟೋ ದರವನ್ನು ಪರಿಷ್ಕರಿಸಲಾಗಿದೆ. ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗಳು ಆಟೋ ಚಾಲಕರ ಮೇಲೆ ತೀವ್ರ ಪರಿಣಾಮ ಬೀರಿದೆ. ಬೈಕ್ ಟ್ಯಾಕ್ಸಿ ವಿಚಾರ ಹೈಕೋರ್ಟ್ ಅಂಗಳದಲ್ಲಿದೆ. ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳನ್ನು ಸಂಪೂರ್ಣವಾಗಿ ನಿಷೇಧಿಸಿದ ನಂತರ ದರವನ್ನು ಪರಿಷ್ಕರಿಸಬೇಕು ಎಂದು ಕೆಲ ಆಟೋ ಚಾಲಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments