ಮುಡಾ ಹಗರಣ ಬಯಲಿಗೆಳೆದಿರುವ ಮಾಹಿತಿ ಹಕ್ಕು ಕಾರ್ಯಕರ್ತ ಹಾಗೂ ಹೋರಾಟಗಾರ ಸ್ನೇಹ ಮಯಿ ಕೃಷ್ಣ ಅವರ ಜೀವಕ್ಕೆ ಅಪಾಯ ಉಂಟಾಗುವ ಸಾಧ್ಯ ತೆ ಇರುವುದರಿಂದ ಸೂಕ್ತ ಭದ್ರತೆ ನೀಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಸಂಬಂಧ ಅವರು ಗೃಹ ಸಚಿವ ಡಾ. ಜಿ.ಪರಮೇಶ್ವರ ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.
ಸ್ನೇಹಮಯಿ ಕೃಷ್ಣ ಅವರು ರಾಜ್ಯದಲ್ಲಿ ನಡೆದಿರುವ ಭ್ರಷ್ಟಾಚಾರ ಪ್ರಕರಣಗಳು ಹಾಗೂ ವಿಶೇಷವಾಗಿ ಮೈಸೂರಿನ ಮುಡಾ ಹಗರಣ ಸಂಬಂಧ ದಾಖಲೆಗಳೊಂದಿಗೆ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಈ ಮುಖಾಂತರ ಪ್ರಕರಣವನ್ನು ಬೆಳಕಿಗೆ ತರುವಲ್ಲಿ ಪ್ರಮುಖಪಾತ್ರ ವಹಿಸಿದ್ದಾರೆ. ಅವರ ಜೀವಕ್ಕೆ ಅಪಾಯ ಉಂಟಾಗುವ ಸಾಧ್ಯತೆ ಇರುವುದರಿಂದ ಸೂಕ್ತ ಭದ್ರತೆ ನೀಡುವಂತೆ ವಿಜಯೇಂದ್ರ ಪತ್ರದ ಮೂಲಕ ಕೋರಿದ್ದಾರೆ.
.