ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಬುಧವಾರ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದರು.ಈ ಕುರಿತು ಸಾಮಾಜಿಕ ಜಾಲತಾಣದ ಪೋಸ್ಟ್ ಮೂಲಕ ಪ್ರಕಟಿಸಿರುವ ವಿಜಯೇಂದ್ರ ಅವರು, ಹೊಸ ವರ್ಷದ ದಿನದಂದು ಆಶೀರ್ವಾದ ಪಡೆಯಲು ಶಾ ಅವರನ್ನು ಭೇಟಿಯಾಗಿರುವುದಾಗಿ ತಿಳಿಸಿದ್ದಾರೆ.ನಿನ್ನೆ ಮಧ್ಯಾಹ್ನ 2.30ಕ್ಕೆ ದೆಹಲಿ ತಲುಪಿದ ವಿಜಯೇಂದ್ರ ಅವರು ಸಂಜೆ ಅಮಿತ್ ಶಾ ಅವರನ್ನು ಭೇಟಿ ಮಾಡಿ “ವಚನ’ ಪುಸ್ತಕವನ್ನು ಕೊಡುಗೆಯಾಗಿ ನೀಡಿದರು.
ಭೇಟಿ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ವಿಜಯೇಂದ್ರ ಅವರು, ಉಕ್ಕಿನ ಮನುಷ್ಯ ಎಂದು ಬಣ್ಣಿಸಲ್ಪಡುವ ಸರ್ದಾರ್ ವಲ್ಲಭಾಯಿ ಪಟೇಲರ ನಂತರ ದೇಶಕಂಡ ದಿಟ್ಟ ಗೃಹ ಸಚಿವ ಅಮಿತ್ ಶಾ ಅವರನ್ನು 2025ರ ನೂತನ ಕ್ಯಾಲೆಂಡರ್ ಹೊಸವರ್ಷದ ದಿನವಾದ ಇಂದು ನವದೆಹಲಿಯಲ್ಲಿ ಭೇಟಿಯಾಗಿ ಶುಭಾಶಯ ಕೋರಿ ಆಶೀರ್ವಾದ ಪಡೆಯಲಾಯಿತು.
ಬಿ.ವೈ.ವಿಜಯೇಂದ್ರ ಟ್ವೀಟ್,
‘ಉಕ್ಕಿನ ಮನುಷ್ಯ ಎಂದು ಬಣ್ಣಿಸಲ್ಪಡುವ ಸರ್ದಾರ್ ವಲ್ಲಭಾಯಿ ಪಟೇಲರ ನಂತರ ದೇಶಕಂಡ ದಿಟ್ಟ ಗೃಹ ಸಚಿವ ಶ್ರೀ ಜೀ ಅವರನ್ನು 2025ರ ನೂತನ ಕ್ಯಾಲೆಂಡರ್ ಹೊಸವರ್ಷದ ದಿನವಾದ ಇಂದು ನವದೆಹಲಿಯಲ್ಲಿ ಭೇಟಿಯಾಗಿ ಶುಭಾಶಯ ಕೋರಿ ಆಶೀರ್ವಾದ ಪಡೆಯಲಾಯಿತು. ಕರ್ನಾಟಕದಲ್ಲಿ ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ಕಳೆದ ವರ್ಷದಿಂದೀಚೆಗೆ ಹಮ್ಮಿಕೊಂಡಿರುವ ಕಾರ್ಯಕ್ರಮಗಳು, ಹೋರಾಟಗಳು ಹಾಗೂ ಕಾಂಗ್ರೆಸ್ ಆಡಳಿತದ ಪರಿಣಾಮವಾಗಿ ಪ್ರಸ್ತುತ ರಾಜ್ಯದಲ್ಲಿ ಉದ್ಭವಿಸಿರುವ ಅನೇಕ ಸಮಸ್ಯೆಗಳು, ಕಾಂಗ್ರೆಸ್ ಸರ್ಕಾರದ ಸಚಿವರುಗಳ ವಿರುದ್ಧದ ಆರೋಪಗಳ ಕುರಿತು ಹಾಗೂ ಮುಂಬರುವ ದಿನಗಳಲ್ಲಿ ಸಂಘಟನೆಯನ್ನು ಮತ್ತಷ್ಟು ಬಲ ವೃದ್ಧಿಗೊಳಿಸಲು ಯೋಜಿಸಿರುವ ಕಾರ್ಯಕ್ರಮಗಳ ಕುರಿತು ವಿವರಿಸಿ ಸೂಕ್ತ ಮಾರ್ಗದರ್ಶನವನ್ನು ಕೋರಲಾಯಿತು. ದೇಶ ಸುಭದ್ರತೆಗಾಗಿ ಪ್ರಧಾನಿಗಳೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಐತಿಹಾಸಿಕ ಹೆಜ್ಜೆಗಳನ್ನಿಡುತ್ತಿರುವ ಮಾನ್ಯ ಅಮಿತ್ ಶಾ ಜೀ ಯವರು ಪಕ್ಷ ಸಂಘಟನೆಗಾಗಿಯೂ ಅಷ್ಟೇ ಬದ್ಧತೆ ಹಾಗೂ ಕಾಳಜಿ ವಹಿಸುವುದು ಪ್ರತಿಯೊಬ್ಬ ಕಾರ್ಯಕರ್ತನಲ್ಲಿ ಆತ್ಮವಿಶ್ವಾಸದ ಛಲ ತುಂಬಲು ಕಾರಣವಾಗಿದೆ, ಅವರ ಸಂಘಟನಾ ಸಾಮರ್ಥ್ಯದ ಚತುರತೆ ಪಕ್ಷ ಕಟ್ಟುವ ಕಾಯಕದಲ್ಲಿ ಸದಾ ನನಗೆ ಪ್ರೇರಣೆಯ ಶಕ್ತಿಯಾಗಿದೆ. ಇಂದಿನ ಅವರ ಭೇಟಿಯ ಕ್ಷಣಗಳು ಎಂದಿನಂತೆ ಇನ್ನಷ್ಟು ಉತ್ಸಾಹತುಂಬಿ ಸಂಘಟನೆಯನ್ನು ನಿರೀಕ್ಷೆಯ ಗುರಿ ತಲುಪಿಸಲು ಆತ್ಮವಿಶ್ವಾಸ ತುಂಬಿತು.’