Top Newsಕ್ರೈಂ ಸ್ಟೋರಿರಾಜ್ಯಸುದ್ದಿ

ಬೆಂಗಳೂರು ವಿವಿಯ ಸ್ನಾತಕೋತ್ತರ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್​​ನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ವಿದ್ಯಾರ್ಥಿನಿಯನ್ನು ಹೆಚ್‌ಡಿ ಕೋಟೆಯ ಹೆಬ್ಬಲಗುಪ್ಪೆ ಹಳ್ಳಿಯ ಪಾವನ ಹೆಚ್‌ಎನ್ (23) ಎಂದು ಗುರುತಿಸಲಾಗಿದೆ.

ಮೃತ ವಿದ್ಯಾರ್ಥಿನಿ ಬೆಂಗಳೂರು ವಿವಿ ಜ್ಞಾನಭಾರತಿ ಕ್ಯಾಂಪಸ್​​ನಲ್ಲಿರುವ ಕನ್ನಡ ಅಧ್ಯಯನ ಕೇಂದ್ರದಲ್ಲಿ ದ್ವಿತೀಯ ವರ್ಷದ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದಳು. ಸೋಮವಾರ ಮದ್ಯಾಹ್ನ ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಗೆ ಕಾರಣ ತಿಳಿದುಬಂದಿಲ್ಲ.

ಮೃತ ಪಾವನ ಮೈಸೂರು ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಹೆಬ್ಬಲಗುಪ್ಪೆ ಹಳ್ಳಿ ಮೂಲದವರು ಎಂದು ಹೇಳಲಾಗುತ್ತಿದೆ. ಸ್ತಳಕ್ಕೆ ಜ್ಞಾನಭಾರತಿ ಪೊಲೀಸರು ಆಗಮಿಸಿ ಪರಿಶೀಲಿನೆ ನಡೆಸುತ್ತಿದ್ದಾರೆ.

Comments (0)

Your email address will not be published. Required fields are marked *

Back to top button