ಬೆಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬ್ಯಾಡ್ಮಿಂಟನ್ ಕೋಚ್ವೊಬ್ಬರನ್ನು ಹುಳಿಮಾವು ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
16 ವರ್ಷದ ಬಾಲಕಿಯ ತಾಯಿ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು, ತಮಿಳುನಾಡು ಮೂಲದ ಸುರೇಶ್ ಬಾಲಾಜಿ (30) ವರ್ಷ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿಯ ಮೇಲೆ ಹಲವು ಬಾರಿ ಅತ್ಯಾಚಾರವೆಸಗಿದ್ದನೆನ್ನಲಾದ ಆರೋಪಿಯ ಮೊಬೈಲ್ ಫೋನ್‌ನಲ್ಲಿ ಸಂತ್ರಸ್ತ ಬಾಲಕಿಯಲ್ಲದೆ, ಇನ್ನೂ ಕೆಲ ಬಾಲಕಿಯರ ಬೆತ್ತಲೆ ಫೋಟೋ, ವಿಡಿಯೋಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಎಸ್ಎಸ್ಎಲ್‌ಸಿ ಪರೀಕ್ಷೆಯ ಫಲಿತಾಂಶದ ನಿರೀಕ್ಷೆಯಲ್ಲಿದ್ದ ಬಾಲಕಿ, ರಜಾ ದಿನಗಳನ್ನು ಕಳೆಯಲು ಅಜ್ಜಿಯ ಮನೆಗೆ ತೆರಳಿದ್ದಳು. ಫೋನ್‌ನಿಂದ ಅಪರಿಚಿತ ನಂಬರ್‌ಗೆ ಮೊಮ್ಮಗಳ ಬೆತ್ತಲೆ ಫೋಟೋ ಕಳಿಸಿದ್ದನ್ನು ಗಮನಿಸಿದ್ದ ಬಾಲಕಿಯ ಅಜ್ಜಿ, ತಕ್ಷಣ ಆಕೆಯ ಪೋಷಕರಿಗೆ ಮಾಹಿತಿ ನೀಡಿದ್ದರು. ಬಳಿಕ ಬಾಲಕಿಯ ತಾಯಿಯು ಮಗಳನ್ನು ವಿಚಾರಿಸಿದಾಗ ಸಾಕಷ್ಟು ಬಾರಿ ಬ್ಯಾಡ್ಮಿಂಟನ್ ಕೋಚ್, ಲೈಂಗಿಕ ದೌರ್ಜನ್ಯ ಎಸಗಿರುವುದು ತಿಳಿದು ಬಂದಿದೆ. ಅನೇಕ ಸಂದರ್ಭಗಳಲ್ಲಿ ಡ್ಯಾನ್ಸ್ ಕ್ಲಾಸ್, ಟ್ಯೂಷನ್ ತ್ಯಜಿಸಿ ಆರೋಪಿಯನ್ನು ಭೇಟಿ ಮಾಡಿರುವುದಾಗಿ ಬಾಲಕಿಯು ತನ್ನ ತಾಯಿಯ ಬಳಿ ಹೇಳಿಕೊಂಡಿದ್ದಾಳೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಮಗಳಿಂದ ಎಲ್ಲ ವಿಚಾರ ತಿಳಿದು ಹುಳಿಮಾವು ಠಾಣೆಗೆ ಬಾಲಕಿಯ ತಾಯಿ ದೂರು ನೀಡಿದ್ದರು.
ಬಳಿಕ ಮಗಳಿಂದ ಎಲ್ಲಾ ವಿಚಾರ ತಿಳಿದ ತಾಯಿ ಹುಳಿಮಾವು ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಅನ್ವಯ ಪೊಲೀಸರು ಬ್ಯಾಡ್ಮಿಂಟನ್ ಕೋಚ್ನನ್ನು ಅರೆಸ್ಟ್ ಮಾಡಿದ್ದಾರೆ.


