ಜಿಲ್ಲೆ

ಬಾಗಲಕೋಟೆಯಲ್ಲಿ ಭೀಕರ ಅಪಘಾತ: ಟ್ರ್ಯಾಕ್ಟ ರ್​​ಗೆ ಕಾರು ಡಿಕ್ಕಿ ನಾಲ್ವರು ಸ್ಥಳದಲ್ಲೇ ಸಾವು

ಬಾಗಲಕೋಟೆ: ಕಬ್ಬು ತುಂಬಿ ನಿಂತಿದ್ದ ಟ್ರ್ಯಾಕ್ಟರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ತುಂಬರಮಟ್ಟಿ ಕ್ರಾಸ್ ಬಳಿ ನಡೆದಿದೆ. ಹುಬ್ಬಳ್ಳಿ ಸೋಲ್ಹಾಪೂರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗಿನ ಜಾವ 4 ಗಂಟೆಗೆ ಈ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಮಲ್ಲು ಪೂಜಾರಿ (24), ಕಲ್ಲಪ್ಪ ಕೌಟಗಿ, (34), ಕಾಮಾಕ್ಷಿ ಬಡಿಗೇರ (35), ತುಕಾರಾಮ್ ತಳೇವಾಡ (30) ಎಂಬ ನಾಲ್ವರು ಮೃತಪಟ್ಟಿದ್ದು, ಮೃತರನ್ನೆಲ್ಲಾ ವಿಜಯಪುರ ಜಿಲ್ಲೆಯ ಹೊನಗನಹಳ್ಳಿ ಗ್ರಾಮದವರು ಎಂದು ಗುರುತಿಸಲಾಗಿದೆ…

ಇನ್ನು ಇವರೆಲ್ಲ ಬಾದಾಮಿಯಿಂದ ಹೊನಗನಹಳ್ಳಿಗೆ ತೆರಳುತ್ತಿದ್ದರು, ಇನ್ನು ಘಟನೆ ಬೆನ್ನಲ್ಲೇ ಸ್ಥಳಕ್ಕೆ ಬಾಗಲಕೋಟೆ ಎಸ್ಪಿ ಅಮರನಾಥ ರೆಡ್ಡಿ ಭೇಟಿ ನೀಡಿದ್ದು, ಜೆಸಿಬಿ ಮೂಲಕ ಕಬ್ಬು ತೆರವುಗೊಳಿಸಿ ಕಾರು ಹೊರ ತೆಗೆಯಲಾಯಿತು. ಇತ್ತ ಮೃತದೇಹಗಳನ್ನು ಬೀಳಗಿ ತಾಲೂಕು
ಆಸ್ಪತ್ರೆಗೆ ಶವ ಪರೀಕ್ಷೆಗೆ ಕೊಂಡೊಯ್ಯಲಾಯಿತು. ಸ್ಥಳದಲ್ಲಿ ಮೃತರ ಸಂಭಂಧಿಗಳ ಆಕ್ರಂದನ ಮುಗಿಲು ಮುಟ್ಟಿತ್ತು.

Comments (0)

Your email address will not be published. Required fields are marked *

Back to top button