ವಿಜಯಪುರ: ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಕೊಲೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು 5 ದಿನಗಳ ಕಾಲ ಪೋಲಿಸ್ ವಶಕ್ಕೆ ನೀಡಿ 2ನೇ ಹೆಚ್ಚುವರಿ ಜಿಲ್ಲಾ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.
ಬಾಗಪ್ಪ ಹರಿಜನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಪ್ರಕಾಶ್ ಅಲಿಯಾಸ್ ಪಿಂಟ್ಯಾ, ಸಂದೀಪ್, ರಾಹುಲ್ ಮತ್ತು ಮಣಿಕಂಠನನ್ನು ಗಾಂಧಿ ಚೌಕ ಪೋಲಿಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಈ ವೇಳೆ ನ್ಯಾಯಾಲಯವು ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಪೋಲಿಸ್ ಕಸ್ಟಡಿಗೆ ನೀಡಿದೆ.
ಫೆಬ್ರವರಿ 11 ರಂದು ವಿಜಯಪುರದ ಮದೀನಾ ನಗರದಲ್ಲಿ ಭೀಮಾತೀರದ ರೌಡಿ ಬಾಗಪ್ಪನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಕೊಲೆ ಮಾಡಿದ್ದರು.