ಕಲಬುರಗಿ : ಜಿಲ್ಲೆಯ ಅಫಜಲಪುರ ತಾಲೂಕಿನ ದೇವಲ ಗಾಣಗಾಪುರ ಶ್ರೀ ಗುರು ದತ್ತಾತ್ರೇಯ ದೇವಸ್ಥಾನವನ್ನು ಕಾಶಿ ದೇವಸ್ಥಾನ ಮಾದರಿಯಲ್ಲಿ ಅಭಿವೃದ್ಧಿ ಪಡಿಸಬೇಕೆಂದು ಆಗ್ರಹಿಸಿ ಶ್ರೀ ಕ್ಷೇತ್ರವನ್ನು ಬಂದ್ ಮಾಡಿ ಪ್ರತಿಭಟನೆ ಮಾಡಲಾಯಿತು..
ಕ್ಷೇತ್ರದಲ್ಲಿನ ಪುಮುಖ ರಸ್ತೆಗಳು ಸೇರಿದಂತೆ ಎಲ್ಲೆಡೆಯ ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ. ಭೀಮಾ ನದಿ ಸೇತುವೆಯ ರಸ್ತೆಗೆ ಮುಳ್ಳು ಕಂಟಿಗಳನ್ನು ಬಡಿದು ಸಂಚಾರ ಸ್ಥಗಿತಗೊಳಿಸಲಾಗಿದೆ. ಅಫಜಲಪುರ ಮಾರ್ಗದಿಂದ ಬರುವ ರಸ್ತೆಯಲ್ಲಿ ವಾಹನಗಳು ಸಂಚಾರ ಸಂಪೂರ್ಣವಾಗಿ ಬಂದ್ ಆಗಿದ್ದು, ಮಹಾರಾಷ್ಟ್ರ, ತೆಲಂಗಾಣ ಸೇರದಂತೆ ಅನ್ಯ ಜಿಲ್ಲೆಗಳ ಭಕ್ತರು ನಡೆದುಕೊಂಡು ದೇವಸ್ಥಾನದತ್ತ ತೆರಳಿದರು.
ಕ್ಷೇತ್ರದ ಅಭಿವೃದ್ಧಿಗೆ ಆಗ್ರಹಿಸಿ ಶಿವಕುಮಾರ ನಾಟೀಕರ ಅವರು ಕಳೆದ ಎರಡು ವಾರಗಳಿಂದ ಧರಣಿ ಸತ್ಯಾಗ್ರಹ ನಡೆಸಿದರೂ ಜಿಲ್ಲಾಡಳಿತ ಯಾವುದೇ ಸ್ಪಂದನೆ ನೀಡಲಿಲ್ಲ. ಹೀಗಾಗಿ, ಬಂದ್‌ಗೆ ಕರೆಕೊಟ್ಟಿದ್ದು, ಯಾತ್ರಿಕರು ಪರದಾಡುವಂತೆ ಆಗಿದೆ.