Tuesday, June 24, 2025
26.6 C
Bengaluru
Google search engine
LIVE
ಮನೆ#Exclusive NewsTop Newsಆರೋಗ್ಯ ಇಲಾಖೆಯಲ್ಲಿ ನೂರಾರು ನಕಲಿ ನೌಕರರು

ಆರೋಗ್ಯ ಇಲಾಖೆಯಲ್ಲಿ ನೂರಾರು ನಕಲಿ ನೌಕರರು

ಬೆಂಗಳೂರು: ಎಸ್ಸೆಸ್ಸೆಲ್ಸಿ ನಕಲಿ ಅಂಕಪಟ್ಟಿ ಸಲ್ಲಿಸಿ ಸಹಸ್ರಾರು ಅಭ್ಯರ್ಥಿಗಳು ರಾಜ್ಯ ಆರೋಗ್ಯ ಇಲಾಖೆಯಲ್ಲಿ ಡಿ ಗ್ರೂಪ್ ನೌಕರಿ ಗಿಟ್ಟಿಸಿಕೊಂಡಿರುವುದು ಬಯಲಾಗಿದೆ.

ನಕಲಿ ಅಂಕಪಟ್ಟಿ ಸಲ್ಲಿಸಿ ಜಲಸಂಪನ್ಮೂಲ ಇಲಾಖೆಯ ಬ್ಯಾಕ್​ಲಾಗ್ ನೌಕರಿ ಗಿಟ್ಟಿಸಿದ ಪ್ರಕರಣ ಇನ್ನೂ ಜೀವಂತ ಇರುವಾಗಲೇ ಮತ್ತೊಂದು ಇಲಾಖೆಯಲ್ಲಿ ಇದೇ ರೀತಿ ನಕಲಿ ನಡೆದಿರುವುದು ಪ್ರತಿಭಾವಂತ ಮತ್ತು ಅರ್ಹ ವ್ಯಕ್ತಿಗಳಿಗೆ ಆಘಾತ ಉಂಟು ಮಾಡಿದೆ. ರಾಜ್ಯದಲ್ಲಿ ನಡೆದ ಪಿಎಸ್​ಐ, ಕೆಇಐ, ಕೆಪಿಟಿಸಿಎಲ್ ನೇಮಕ ಪರೀಕ್ಷಾ ಅಕ್ರಮಗಳಿಂದ ಪ್ರತಿಭಾವಂತರಿಗೆ ಪರೀಕ್ಷೆ ಮತ್ತು ನೇಮಕಾತಿ ಮೇಲಿನ ವಿಶ್ವಾಸಕ್ಕೆ ಬಲವಾದ ಪೆಟ್ಟು ಬಿದ್ದಿದೆ.

ಆರೋಗ್ಯ ಇಲಾಖೆಯಲ್ಲಿ ಖಾಲಿ ಇದ್ದ 1,582 ಡಿ ಗ್ರೂಪ್ ಹುದ್ದೆಗಳ ಭರ್ತಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ 2015ರ ಮಾರ್ಚ್​ನಲ್ಲಿ ಅಧಿಸೂಚನೆ ಹೊರಡಿಸಿತ್ತು. ವಿದ್ಯಾರ್ಹತೆ 10ನೇ ತರಗತಿ ನಿಗದಿಪಡಿಸಲಾತ್ತು. ಆಯ್ಕೆಯಾದವರಿಗೆ ನವೆಂಬರ್​ನಲ್ಲಿ ಕೌನ್ಸೆಲಿಂಗ್ ಮೂಲಕ ನೇಮಕಾತಿ ಆದೇಶ ನೀಡಲಾಗಿತ್ತು. ನೇಮಕಗೊಂಡ ನೌಕರರು ಎಸ್ಸೆಸ್ಎಲ್ಸಿ ನಕಲಿ ಅಂಕಪಟ್ಟಿ ಸಲ್ಲಿಸಿ ವಿಶೇಷ ನೇಮಕಾತಿ ಹೊಂದಿದ್ದಾರೆ ಎಂಬ ದೂರುಗಳು ಬಂದಿದ್ದವು. ಈ ಸಂಬಂಧ ಅಂಕಪಟ್ಟಿಯ ನೈಜತೆ ಪರಿಶೀಲಿಸಿ ವರದಿ ಸಲ್ಲಿಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಗೆ ಆರೋಗ್ಯ ಇಲಾಖೆ ಸೂಚಿಸಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments