ರಾಜಕೀಯ

ಬೆಂಗಳೂರು ದೊಡ್ಡ ನಗರ ಅಲ್ಲೊಂದು ಇಲ್ಲೊಂದು ಕಿರುಕಳ ಘಟನೆ ಆಗುತ್ತೆ; ಗೃಹ ಸಚಿವರ ಉಡಾಫೆ ಹೇಳಿಕೆ

ಬೆಂಗಳೂರು: ಬಿಟಿಎಂ ಲೇಔಟ್‌ನಲ್ಲಿ ಯುವತಿ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ ಗೃಹ ಸಚಿವ ಪರಮೇಶ್ವರ್ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಬೆಂಗಳೂರು ದೊಡ್ಡ ನಗರ ಇಂತಹ ಪಟ್ಟಣದಲ್ಲಿ ಅಲ್ಲೊಂದು ಇಲ್ಲೊಂದು ಘಟನೆ ನಡೆಯುತ್ತವೆ ಎಂದು ಉಡಾಫೆ ಉತ್ತರ ನೀಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಇಷ್ಟು ದೊಡ್ಡ ಸಿಟಿಯಲ್ಲಿ ಅಲ್ಲಿ ಇಲ್ಲಿ ಇಂತಹ ಒಂದು ಘಟನೆಗಳು ಆಗುತ್ತದೆ. ನಿತ್ಯವೂ ಪೊಲೀಸ್ ಕಮೀಷನರ್‌ಗೆ ಎಚ್ಚರಿಕೆಯಿಂದ ಇರಬೇಕು. ಬೀಟ್ ವ್ಯವಸ್ಥೆ ಚೆನ್ನಾಗಿ ಆಗಬೇಕು ಎಂದು ಹೇಳುತ್ತೇನೆ. ಪ್ರತಿ ಏರಿಯಾ ಮಾನಿಟರ್ ಮಾಡಬೇಕು. ಪೆಟ್ರೋಲಿಂಗ್ ಏನು ಆಗುತ್ತಿದೆ ಅದನ್ನು ಶಿಸ್ತಿನಿಂದ, ಪರಿಣಾಮಕಾರಿಯಾಗಿ ಮಾಡಬೇಕು ಎಮದು ನಿತ್ಯ ಸೂಚನೆ ಕೊಡುತ್ತೇನೆ ಎಂದರು.

ಅಲ್ಲೊಂದು ಇಲ್ಲೊಂದು ಘಟನೆ ಆದಾಗ ಸ್ವಾಭಾವಿಕವಾಗಿ ಜನರ ಮನಸಿನಲ್ಲಿ ಗಮನ ಸೆಳೆಯುತ್ತದೆ. ಅಷ್ಟಕ್ಕೇ ನಾವು ಬಿಡೋದಿಲ್ಲ. ನಿರಂತರವಾಗಿ ಪೊಲೀಸ್ ಇಲಾಖೆ ಕೆಲಸ ಮಾಡುತ್ತಿದೆ. 24/7 ಮಳೆ, ಚಳಿ ಅನ್ನದೇ ಪೊಲೀಸರು ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಬೆಂಗಳೂರು ಶಾಂತವಾಗಿ ಇದೆ. ಇಷ್ಟು ದೊಡ್ಡ ಪಟ್ಟಣದಲ್ಲಿ ಅಲ್ಲೊಂದು ಇಲ್ಲೊಂದು ಘಟನೆ ಆಗುತ್ತೆ. ಅದಕ್ಕೆ ನಾವು ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಬೀಟ್ ವ್ಯವಸ್ಥೆ ಮತ್ತಷ್ಟು ಪರಿಣಾಮವಾಗಿ ಮಾಡಿ ಎಂದು ಇವತ್ತು ಕೂಡ ಕಮೀಷನರ್‌ಗೆ ಸೂಚನೆ ನೀಡಿದ್ದೇನೆ ಎಂದು ಬೇಜವಾಬ್ದಾರಿ ಹೇಳಿಕೆ ಕೊಟ್ಟರು

Comments (0)

Your email address will not be published. Required fields are marked *

Back to top button