Thursday, November 20, 2025
19.5 C
Bengaluru
Google search engine
LIVE
ಮನೆ#Exclusive NewsTop Newsಪತ್ನಿಯನ್ನು ಕೊಲೆಗೈದ ಕೊಲೆಗಡುಕ ಪತಿ ಅಂದರ್

ಪತ್ನಿಯನ್ನು ಕೊಲೆಗೈದ ಕೊಲೆಗಡುಕ ಪತಿ ಅಂದರ್

ಬೆಂಗಳೂರು: ಪತ್ನಿಯನ್ನು ಶಂಕಿಸಿ ಕೊಲೆ ಮಾಡಿ, ಆಕೆಯನ್ನು ಯಾರೋ ಹತ್ಯೆ ಮಾಡಿದ್ದಾರೆ ಎಂದು ನಾಟಕವಾಡುತ್ತಿದ್ದ ಆರೋಪಿ ಪತಿಯನ್ನು ಬಾಗಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪತ್ನಿ ಮುಮ್ತಾಜ್ ಎಂಬಾಕೆಯನ್ನು ಕಬ್ಬಿಣದ ವಸ್ತುವಿನಿಂದ ಹೊಡೆದು ಕೊಲೆ ಮಾಡಿದ ಆರೋಪದ ಮೇಲೆ ಆಂಧ್ರಪ್ರದೇಶದ ಚಿತ್ತೂರು ಮೂಲದ ಮೆಹಬೂಬ್ ಪಾಷಾ (50) ಎಂಬಾತನನ್ನು ಬಂಧಿಸಲಾಗಿದೆ.

ಆರೋಪಿಗೆ ಇಬ್ಬರು ಪತ್ನಿಯರಿದ್ದು, ಕೂಲಿ ಕೆಲಸ ಮಾಡಿಕೊಂಡು ತನ್ನ ಎರಡನೇ ಪತ್ನಿ ಮುಮ್ತಾಜ್ ಜೊತೆ ಬಾಗಲೂರಿನ ರಜಾಕ್ ಸಾಬ್ ಪಾಳ್ಯದಲ್ಲಿ ವಾಸವಿದ್ದರು. ಆಗಸ್ಟ್ 25ರಂದು ಬಾಗಲೂರು ಪೊಲೀಸ್ ಠಾಣೆಗೆ ಬಂದಿದ್ದ ಆರೋಪಿ, ”ಆಗಸ್ಟ್ 24ರಂದು ಸಂಬಂಧಿಕರ ಮನೆಯಲ್ಲಿ ಕಾರ್ಯಕ್ರಮದ ನಿಮಿತ್ತ ನಾನು ಕೋಲಾರಕ್ಕೆ ಹೋಗಿದ್ದೆ. ಪತ್ನಿಗೆ ಕರೆ ಮಾಡಿದಾಗ ಆಕೆ ಸ್ವೀಕರಿಸಲಿಲ್ಲ. ಬೆಳಗ್ಗೆ ಮನೆಗೆ ಬಂದು ನೋಡಿದಾಗ ಮನೆಯಲ್ಲಿಯೂ ಇರಲಿಲ್ಲ. ನಾನು ಕೆಲಸ ಮಾಡುತ್ತಿದ್ದ ಸೀಬೆ ತೋಟದಲ್ಲಿ‌ ಯಾರೋ ಆಕೆಯನ್ನು ಹತ್ಯೆ ಮಾಡಿದ್ದಾರೆ” ಎಂದು ದೂರು ನೀಡಿದ್ದ.

ದೂರು ಸ್ವೀಕರಿಸಿ ತನಿಖೆ ಆರಂಭಿಸಿದ್ದ ಪೊಲೀಸರು, ಆರೋಪಿಯ ಮಾತಿನ ಮೇಲೆ ಅನುಮಾನಗೊಂಡು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಸಲಿ ವಿಚಾರ ಬಯಲಾಗಿದೆ. ಪತ್ನಿಯ ಮೇಲೆ ಅನುಮಾನ ಹೊಂದಿದ್ದ ಆರೋಪಿ ಆಗಸ್ಟ್ 24ರಂದು ಆಕೆಯನ್ನು ತಾನು ಕೆಲಸ ಮಾಡುತ್ತಿದ್ದ ಸೀಬೆ ತೋಟಕ್ಕೆ ಕರೆದೊಯ್ದು ಕಬ್ಬಿಣದ ವಸ್ತುವಿನಿಂದ ಆಕೆಯ ತಲೆಗೆ ಹೊಡೆದು ಕೊಲೆ ಮಾಡಿದ್ದ. ಬಳಿಕ‌ ಆಕೆಯ ಶವವನ್ನು ಅಲ್ಲಿಯೇ ಬಿಟ್ಟು ರಾತ್ರಿಯಿಡಿ ಮನೆಗೆ ಹೋಗದೇ ಕಾದು ಕುಳಿತ್ತಿದ್ದ. ಬೆಳಗ್ಗೆ ಮನೆಗೆ ತೆರಳಿ, ಏರಿಯಾದಲ್ಲಿ ಯಾರಿಗೂ ಅನುಮಾನ ಬಾರದಂತೆ ತಾನೇ ಬಂದು ದೂರು ನೀಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments