ಬೆಂಗಳೂರು: ಕೇಂದ್ರ ಸರ್ಕಾರ ಹಿಂದಿ ದಿವಸ್ ಆಚರಣೆ ಮಾಡುವುದನ್ನು ವಿರೋಧಿಸಿ ಪ್ರತಿಭಟನೆ ಮಾಡಲು ಕರ್ನಾಟಕ ರಕ್ಷಣೆ ವೇದಿಕೆ ಸಜ್ಜಾಗಿದೆ. ನಾಳೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆವರೆಗೆ ಪ್ರತಿಭಟನೆ ಮಾಡುತ್ತಿದ್ದು, ಕನ್ನಡ ದಿವಸವನ್ನು ಆಚರಣೆ ಮಾಡುವ ವರೆಗೂ ಹಿಂದಿ ದಿವಸ್ ಆಚರಣೆ ಮಾಡುವುದನ್ನು ನಿಲ್ಲಿಸಲಿ ಎಂದು ಕರವೇ ಅಧ್ಯಕ್ಷ ಟಿ.ಎ ನಾರಾಯಣ ಗೌಡ ಆಗ್ರಹಿಸಿದ್ದಾರೆ.
ಇನ್ನು ಭಾರತದಲ್ಲಿ 22 ಆಡಳಿತಾತ್ಮಕ ಭಾಷೆಗಳು ಇದ್ದು, ಆ ಎಲ್ಲಾ ಭಾಷೆಗಳನ್ನು ಮಾತನಾಡುವವರಿಂದಲ್ಲೇ ಭಾರತ ದೇಶವಾಗಿದೆ. ಅಂತಹ ಎಲ್ಲ ಭಾಷೆಗಳನ್ನು ತುಳಿತಕ್ಕೆ ಒಳಪಡಿಸಲು
ಕೇಂದ್ರ ಸರ್ಕಾರ ಹಿಂದಿ ಸಪ್ತಾಹ ಹಿಂದಿ ದಿವಸ್ ಕಾರ್ಯಕ್ರಮ ಮಾಡುತ್ತಿರುವುದು ಸೋಚನಿವಾಗಿದೆ.
ಸೆಪ್ಟಂಬರ್ 14 ರಂದು ಹಿಂದಿ ದಿನವನ್ನಾಗಿ ಆಚರಣೆ ಮಾಡಲಾಗುತ್ತಿದೆ. ಆದರೆ ಇದು ಇತರ ಭಾಷಿಗರ ಮೇಲೆ ಹಿಂದಿ ಹೇರಿಕೆ ಮಾಡುವ ಹುನ್ನಾರ ಎಂದು ಕನ್ನಡಿಗರು ಆರೋಪಿಸಿದ್ದು, ಹಿಂದಿ ದಿವಸ್ ಆಚರಣೆಯು ಒಂದು ಕರಾಳ ದಿನವನ್ನಾಗಿ ಆಚರಣೆ ಮಾಡಲು ಕನ್ನಡಿಗರು ಮುಂದಾಗಿದ್ದಾರೆ.
ಕೇಂದ್ರ ಸರ್ಕಾರದಿಂದ ಆಚರಣೆ ಮಾಡುವುದಾದರೆ ಅದನ್ನು ಕರ್ನಾಟಕ ರಕ್ಷಣಾ ವೇದಿಕೆಯಿಂದ ಅದನ್ನು ಕರಾಳ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಸೆ.14ರಂದು ಫ್ರೀಡಂ ಪಾರ್ಕ್‌ನಲ್ಲಿ ಹಿಂದಿ ದಿವಸ್ ವಿರೋಧಿಸಿ ಕರಾಳ ದಿನವನ್ನಾಗಿ ಆಚರಣೆ ಮಾಡಲು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಎಲ್ಲ ಕನ್ನಡಿಗರೂ ಕೂಡ ಫ್ರೀಡಂ ಪಾರ್ಕ್‌ಗೆ ಬಂದು ಆಗಮಿಸಿ ಹಿಂದಿ ವಿರೋಧಿ ದಿನಾಚರಣೆಗೆ ಬೆಂಬಲ ನೀಡಬೇಕು ಎಂದು ಕರವೇ ಅಧ್ಯಕ್ಷ ಟಿ.ಎಮ ನಾರಾಯಣಗೌಡ ಕರೆ ನೀಡಿದ್ದಾರೆ.