Tuesday, January 27, 2026
26.9 C
Bengaluru
Google search engine
LIVE
ಮನೆ#Exclusive NewsTop Newsಚನ್ನಪಟ್ಟಣ ಟಿಕೆಟ್ ವಿಚಾರವಾಗಿ ದೆಲ್ಲಿ ತಲುಪಿದ್ದ ಬಿಜೆಪಿ ನಿಯೋಗ

ಚನ್ನಪಟ್ಟಣ ಟಿಕೆಟ್ ವಿಚಾರವಾಗಿ ದೆಲ್ಲಿ ತಲುಪಿದ್ದ ಬಿಜೆಪಿ ನಿಯೋಗ

ಬೆಂಗಳೂರು:ವಿಪಕ್ಷ ನಾಯಕ ಅರ್,ಅಶೋಕ ನೇತೃತ್ವದ ಬಿಜಿಪಿ ನಿಯೋಗ ಬುಧವಾರ ದಿಲ್ಲಿಗೆ ತಲುಪಿದ್ದು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಟಿಕೆಟ್ ವಿಚಾರವೂ ಸೇರಿದಂತೆ ಪಕ್ಷದ ಆಂತರಿಕ ವಿದ್ಯಮಾನಗಳ ಬಗ್ಗೆ ವರಿಷ್ಠರ ಗಮನ ಸೆಳೆಯಲಿದ್ದಾರೆ. ಪಕ್ಷವನ್ನು ಯಾರೂ ಹೈಜಾಕ್ ಮಾಡದಂತೆ ನೋಡಿಕೊಳ್ಳಿ ಎಂದು ಹೈಕಮಾಂಡ್ ಮನವಿ ಸಲ್ಲಿಸುವುದು ಈ ಭೇಟಿ ಉದ್ದೇಶ ಎನ್ನಲಾಗಿದೆ.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ , ವಿಪಕ್ಷದ ಉಪನಾಯಕ ಅರವಿಂದ ಬೆಲ್ಲದ್, ಮಾಜಿ ಡಿಸಿಎಂ ಡಾ,ಸಿ,ಎನ್ ಅಶ್ವತ್ಥನಾರಾಯಣ, ಮಾಜಿ ಸಚಿವರಾದ ಸಿ.ಪಿ.ಯೋಗೇಶ್ವರ್, ಸಿ.ಟಿ ರವಿ ಸೇರಿದಂತೆ ಪ್ರಮುಖ ನಾಯಕರು ಈ ನಿಯೋಗದಲ್ಲಿ ಇದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೇಯಾ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಸೇರಿ ಪ್ರಮುಖ ನಾಯಕರನ್ನು ಭೇಟಿ ಮಾಡುವ ಉದ್ದೇಶವನ್ನು ಈ ನಿಯೋಗ ಹೊಂದಿದೆ. ಇದು ಕೇವಲ ಉಪ ಚುನಾವಣ ವಿಚಾರಕ್ಕೆ ಮಾತ್ರ ಸೀಮಿತವಾಗಿಲ್ಲ, ಪಕ್ಷದ ಒಟ್ಟಾರೆ ಬೆಳವಣಿಗೆ ಬಗ್ಗೆ ವರಿಷ್ಠರ ಗಮನ ಸೆಳೆಯುವ ಪ್ರಯತ್ನ ಎಂದು ತಿಳಿದು ಬಂದಿದೆ.ಚನ್ನಪಟ್ಟಣ ಕ್ಷೇತ್ರಕ್ಕೆ ಈ ಬಾರಿ ಜೆಡಿಎಸ್‌ಗೆ ಟಿಕೆಟ್‌ ನೀಡುವುದು ಬೇಡ ಎಂಬುದು ಬಹುತೇಕ ಬಿಜೆಪಿ ನಾಯಕರ ಅಭಿಪ್ರಾಯವಾಗಿದೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments