Thursday, January 29, 2026
16.4 C
Bengaluru
Google search engine
LIVE
ಮನೆ#Exclusive Newsಬಾಂಗ್ಲಾದೇಶ : ಚಿನ್ಮೋಯ್ ಕೃಷ್ಣ ದಾಸ್ ಅವರಿಗೆ ಶಾಕ್​ ನೀಡಿದ ಬಾಂಗ್ಲಾದೇಶ ನ್ಯಾಯಾಲಯ

ಬಾಂಗ್ಲಾದೇಶ : ಚಿನ್ಮೋಯ್ ಕೃಷ್ಣ ದಾಸ್ ಅವರಿಗೆ ಶಾಕ್​ ನೀಡಿದ ಬಾಂಗ್ಲಾದೇಶ ನ್ಯಾಯಾಲಯ

ಢಾಕಾ : ದೇಶದ್ರೋಹದ ಪ್ರಕರಣದಲ್ಲಿ ಬಂಧಿತರಾಗಿರುವ ಹಿಂದೂ ಆಧ್ಯಾತ್ಮಿಕ ನಾಯಕ ಚಿನ್ಮೋಯ್ ಕೃಷ್ಣ ದಾಸ್ ಅವರಿಗೆ ಬಾಂಗ್ಲಾದೇಶ ನ್ಯಾಯಾಲಯ ಶಾಕ್ ನೀಡಿದೆ.

ಅಕ್ಟೋಬರ್ 25 ರಂದು ಚಿತ್ತಗಾಂಗ್‌ನಲ್ಲಿ ಬಾಂಗ್ಲಾದೇಶದ ರಾಷ್ಟ್ರೀಯ ಧ್ವಜದ ಮೇಲೆ ಕೇಸರಿ ಧ್ವಜವನ್ನು ಹಾರಿಸಿದ ಆರೋಪದ ಮೇಲೆ ಚಿನ್ಮೋಯ್ ಕೃಷ್ಣ ದಾಸ್ ವಿರುದ್ಧ ದೇಶದ್ರೋಹದ ಆರೋಪದ ಮೇಲೆ ಚಿನ್ಮೋಯ್ ಕೃಷ್ಣ ದಾಸ್  ಅವರನ್ನು ಬಂಧಿಸಲಾಗಿತ್ತು.

ದೇಶದ್ರೋಹದ ಆರೋಪ ಪ್ರಕರಣದಲ್ಲಿ ಬಂಧಿತರಾಗಿರುವ ಚಿನ್ಮೋಯ್ ಕೃಷ್ಣ ದಾಸ್ ಜಾಮೀನಿಗಾಗಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅದರಂತೆಯೇ ಇಂದು ಬಿಗಿ ಭದ್ರತೆಯ ನಡುವೆ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಚಿತ್ತಗಾಂಗ್ ಕೋರ್ಟ್ ನಲ್ಲಿ ಸುಮಾರು 30 ನಿಮಿಷಗಳ ಕಾಲ ಎರಡೂ ಕಡೆಯ ವಾದವನ್ನು ಆಲಿಸಿದ ನ್ಯಾಯಾದೀಶರು,ಚಿನ್ಮೋಯ್ ಕೃಷ್ಣ ದಾಸ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದರು.

ಢಾಕಾದಿಂದ ಚಟ್ಟೋಗ್ರಾಮ್‌ಗೆ ತೆರಳಿದ್ದ ಸುಪ್ರೀಂ ಕೋರ್ಟ್‌ನ 11 ವಕೀಲರ ತಂಡವು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ಮೆಟ್ರೋಪಾಲಿಟನ್ ಸೆಷನ್ಸ್ ನ್ಯಾಯಾಧೀಶ ಎಂಡಿ ಸೈಫುಲ್ ಇಸ್ಲಾಂ ಅವರು ಸುಮಾರು 30 ನಿಮಿಷಗಳ ಕಾಲ ಎರಡೂ ಕಡೆಯ ವಾದಗಳನ್ನು ಆಲಿಸಿದ ನಂತರ ಹಿಂದೂ ಸನ್ಯಾಸಿ ಚಿನ್ಮಯ್ ಕೃಷ್ಣ ದಾಸ್ ಬ್ರಹ್ಮಚಾರಿ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದರು ಎಂದು ಢಾಕಾ ಮೂಲದ ದಿ ಡೈಲಿ ಸ್ಟಾರ್ ವರದಿ ಮಾಡಿದೆ.

11 ವಕೀಲರ ತಂಡದ ನೇತೃತ್ವವನ್ನು ವಕೀಲ ಅಪುರ್ಬಾ ಕುಮಾರ್ ಭಟ್ಟಾಚಾರ್ಜಿ ವಹಿಸಿದ್ದರು, ಅಪುರ್ಬಾ ಕುಮಾರ್ ಭಟ್ಟಾಚಾರ್ಜಿ ಅವರು ಚಿನ್ಮಯ್ ಸಹ ಭಾಗವಾಗಿರುವ ಸಮ್ಮಿಲಿತಾ ಸನಾತನಿ ಜಾಗರಣ್ ಜೋಟೆ ಸಂಸ್ಥೆಯ ವಕ್ತಾರರೂ ಆಗಿದ್ದಾರೆ. ಚಟ್ಟೋಗ್ರಾಮ್‌ನ ನ್ಯಾಯಾಲಯವು ಜಾಮೀನು ತಿರಸ್ಕರಿಸಿದ ಹಿನ್ನೆಲೆ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ನಿರ್ಧಾರ ಮಾಡಲಾಗಿದೆ ಎಂದು ಚಿನ್ಮಯ್ ಅವರ ವಕೀಲ ಭಟ್ಟಾಚಾರ್ಜಿ ಡೈಲಿ ಸ್ಟಾರ್‌ಗೆ ತಿಳಿಸಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments