Thursday, January 29, 2026
16.9 C
Bengaluru
Google search engine
LIVE
ಮನೆ#Exclusive NewsTop Newsಬಾಂಗ್ಲಾದೇಶದಲ್ಲಿ ಹಿಂದೂ ದೇವಸ್ಥಾನಗಳ ಮೇಲೆ ಪುಂಡರ ದಾಳಿ

ಬಾಂಗ್ಲಾದೇಶದಲ್ಲಿ ಹಿಂದೂ ದೇವಸ್ಥಾನಗಳ ಮೇಲೆ ಪುಂಡರ ದಾಳಿ

ಢಾಕಾ: ಪ್ರಧಾನಿ ಶೇಖ್‌ ಹಸೀನಾ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ನಂತರ ಪುಂಡರು ಬಾಂಗ್ಲಾದೇಶದಲ್ಲಿರುವ ಹಿಂದೂ ದೇವಸ್ಥಾನಗಳ ಮೇಲೆ ದಾಳಿ ನಡೆಸಿ ವಿಕೃತಿ ಮೆರೆದಿದ್ದಾರೆ. ಅಷ್ಟೇ ಅಲ್ಲದೇ ಭಾರತೀಯ ಸಾಂಸ್ಕೃತಿಕ ಕೇಂದ್ರವನ್ನು ಧ್ವಂಸಗೊಳಿಸಿದ್ದಾರೆ. ಸೋಮವಾರ ನಡೆದ ಹಿಂಸಾಚಾರದಲ್ಲಿ 4 ಹಿಂದೂ ದೇವಸ್ಥಾನಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಮತ್ತು ಸಮುದಾಯದ ಮುಖಂಡರೊಬ್ಬರು ಮಾಧ್ಯಮಕ್ಕೆ ತಿಳಿಸಿದ್ದಾರೆ. ಹಿಂದೂ, ಬೌದ್ಧ, ಕ್ರಿಶ್ಚಿಯನ್ ಯೂನಿಟಿ ಕೌನ್ಸಿಲ್ ನಾಯಕಿ ಕಾಜೋಲ್ ದೇಬನಾಥ್ ಮಾತನಾಡಿ, ದೇಶಾದ್ಯಂತ ಕನಿಷ್ಠ 4 ಹಿಂದೂ ದೇವಾಲಯಗಳಿಗೆ ಹಾನಿಯಾಗಿದೆ ಎಂಬ ವರದಿಗಳು ಬಂದಿವೆ. ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಿದ ನಂತರ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕೆಲವು ಹಿಂದೂ ಸಮಾಜದ ಮುಖಂಡರು ಭಯಭೀತರಾಗಿದ್ದಾರೆ ಎಂದು ಹೇಳಿದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments