Wednesday, April 30, 2025
30.3 C
Bengaluru
LIVE
ಮನೆ#Exclusive NewsTop Newsನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ಮಲ್ಪೆಯಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದ 9 ಪ್ರಜೆಗಳು ಪ್ರಜೆಗಳು ಅರೆಸ್ಟ್‌

ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ಮಲ್ಪೆಯಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದ 9 ಪ್ರಜೆಗಳು ಪ್ರಜೆಗಳು ಅರೆಸ್ಟ್‌

ಉಡುಪಿ: ಮಲ್ಪೆಯಲ್ಲಿ ಕಳೆದ ಮೂರು ವರ್ಷಗಳಿಂದ ಅಕ್ರಮವಾಗಿ ನೆಲೆಸಿದ್ದ7 ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.

ಹಕೀಂ ಅಲಿ, ಸುಜೋನ್, ಇಸ್ಮಾಯಿಲ್, ಕರೀಂ, ಸಲಾಂ, ರಾಜಿಕುಲ್, ಮೊಹಮ್ಮದ್ ಸೋಜಿಬ್, ಕಾಜೋಲ್, ಉಸ್ಮಾನ್ ಬಂಧಿತರು. ಮೀನುಗಾರಿಕಾ ಕಾರ್ಮಿಕರಾಗಿ ಉದ್ಯೋಗ ಆರಿಸಿಕೊಂಡು ಬಂದಿದ್ದ ಬಾಂಗ್ಲಾದೇಶೀಯರನ್ನು ಮಲ್ಪೆ ವಡಬಾಂಡೇಶ್ವರ ಬಸ್ ನಿಲ್ದಾಣ ಬಳಿ ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ಪೈಕಿ ಉಸ್ಮಾನ್ ಕರೆತಂದು ಉದ್ಯೋಗಕ್ಕೆ ವ್ಯವಸ್ಥೆ ಮಾಡಿದ್ದ. ಆರೋಪಿಗಳು ಸಿಕ್ಕಿಂನಲ್ಲಿ ನಕಲಿ ಆಧಾರ್‌ ಕಾರ್ಡ್‌ ಸೃಷ್ಟಿಸಿದ್ದರು.

ಸಿಕ್ಕಿಬಿದ್ದಿದ್ದು ಹೇಗೆ?

ಮೀನುಗಾರಿಕಾ ಕಾರ್ಮಿಕರಾಗಿ ಉದ್ಯೋಗ ಅರಿಸಿಕೊಂಡು ಬಂದಿದ್ದ ಬಾಂಗ್ಲಾದೇಶೀಯರನ್ನು ಉಡುಪಿ ತಾಲೂಕಿನ ಮಲ್ಪೆ ವಡಬಾಂಡೇಶ್ವರ ಬಸ್ ನಿಲ್ದಾಣ ಬಳಿ ವಶಕ್ಕೆ ಪಡೆಯಲಾಗಿದೆ. ಮೊದಲಿಗೆ ಮಹಮ್ಮದ್ ಮಾಣಿಕ್ ಎಂಬ ವ್ಯಕ್ತಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ತೆರಳಲು ಪ್ರಯತ್ನಿಸಿದ್ದ. ಆಗ ಬಾಂಗ್ಲಾದೇಶದ ಇಮಿಗ್ರಷನ್ ಅಧಿಕಾರಿಗಳ ಪರಿಶೀಲನೆ ವೇಳೆ ಈತ ಬಾಂಗ್ಲಾದೇಶದ ಮಾಣಿಕ್ ಚೌಕ್ ರಾಜಶಾಹಿ ಎಂದು ತಿಳಿದುಬಂದಿತ್ತು. ಬಳಿಕ ಈತನ ವಿಚಾರಣೆ ವೇಳೆ ಇನ್ನೂ ಹಲವರು ಮಲ್ಪೆಯಲ್ಲಿರುವುದು ತಿಳಿದುಬಂದಿದೆ. ಸದ್ಯ ಈಗ ಮಲ್ಪೆಯಲ್ಲಿ ಹಕೀಂ ಅಲಿ, ಸುಜೋನ್, ಇಸ್ಮಾಯಿಲ್, ಕರೀಂ, ಸಲಾಂ, ರಾಜಿಕುಲ್, ಮೊಹಮ್ಮದ್ ಸೋಜಿಬ್, ಕಾಜೋಲ್, ಉಸ್ಮಾನ್ ಸೇರಿದಂತೆ 9 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.

ಈ ಆರೋಪಿಗಳು ನಕಲಿ ಭಾರತೀಯ ದಾಖಲಾತಿ ಸೃಷ್ಟಿಸಿ ಉಡುಪಿಗೆ ಪ್ರವೇಶಿಸಿದ್ದರು. ಆರೋಪಿಗಳ ಬಳಿ ನಕಲಿ ಆಧಾರ್ ಕಾರ್ಡ್ ಪತ್ತೆಯಾಗಿದೆ. ಆರೋಪಿಗಳ ಪೈಕಿ ಸಿಕ್ಕಿಂ ಅಗರ್ತಲಾದ ಕಾಜೋಲ್ ಎಂಬಾತ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿದ್ದಾನೆಂದು ತಿಳಿದುಬಂದಿದೆ. ಹಾಗೂ ಆರೋಪಿಗಳ ಪೈಕಿ ಉಸ್ಮಾನ್ ಎಂಬಾತ ಅಕ್ರಮವಾಗಿ ಕರೆತಂದು ಉದ್ಯೋಗಕ್ಕೆ ವ್ಯವಸ್ಥೆ ಮಾಡಿದ್ದ ಎಂದು ತಿಳಿದುಬಂದಿದೆ. ಸದ್ಯ ಮಲ್ಪೆ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments