Top Newsರಾಜ್ಯಸಿನಿಮಾಸುದ್ದಿ

ಇಂದಿನಿಂದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ

ಇಂದಿನಿಂದ 16ನೇ ಆವೃತ್ತಿಯ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭವಾಗಲಿದೆ. ಸಂಜೆ 5 ಗಂಟೆಗೆ ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟಿಸಲಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್ ಭಾಗವಹಿಸಲಿದ್ದು, ಚಿತ್ರೋತ್ಸವಕ್ಕೆ ಸಂಬಂಧಿಸಿದ ಐದು ಪುಸ್ತಕಗಳನ್ನು ನಟ ಶಿವರಾಜ್ ಕುಮಾರ್ ಬಿಡುಗಡೆ ಮಾಡಲಿದ್ದಾರೆ.

ಉದ್ಘಾಟನಾ ಸಮಾರಂಭದಲ್ಲಿ ನಟ ಹಾಗೂ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿ ಕಿಶೋರ್ ಕುಮಾರ್, ಜಿ, ಪೊಲಿಷ್ ಸಂಸ್ಥೆಯ ನಿರ್ದೇಶಕಿ ಮಲ್ಗೋರ್ಜಾ ವೆಜ್ಸಿ- ಗೋಲೆಬಿಯಾಕ್, ನಟಿ ಪ್ರಿಯಾಂಕ್ ಎಂ ನರಸಿಂಹಲು ಭಾಗವಹಿಸಲಿದ್ದಾರೆ.

2006ರಲ್ಲಿ ಆರಂಭವಾದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಇದೀಗ 16ನೇ ಆವೃತ್ತಿಗೆ ಪ್ರವೇಶಿಸುತ್ತಿದೆ. ಈ ವರ್ಷದ ಚಲನಚಿತ್ರೋತ್ಸವದ ಥೀಮ್ ʻಸರ್ವ ಜನಾಂಗದ ಶಾಂತಿಯ ತೋಟʼ ಆಯ್ಕೆ ಮಾಡಲಾಗಿದೆ. ಕಳೆದ ವರ್ಷ ʻಸಾಮಾಜಿಕ ನ್ಯಾಯʼ ಥೀಮ್ ನಲ್ಲಿ ಚಲನಚಿತ್ರೋತ್ಸವ ಆಯೋಜಿಸಲಾಗಿತ್ತು. 9ಕೋಟಿ ವೆಚ್ಚದಲ್ಲಿ ಚಲನಚಿತ್ರೋತ್ಸವನ್ನು ಆಯೋಜಿಸಲಾಗುತ್ತಿದೆ

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಅಂತಾರಾಷ್ಟ್ರೀಯ ಮನ್ನಣೆ ಪಡೆದಿದ್ದು, ಬೆಂಗಳೂರು ಭಾರತೀಯ ಮತ್ತು ಅಂತಾರಾಷ್ಟ್ರೀಯ ಸಿನಿಮಾ ಸಂಸ್ಕೃತಿಯ ಮುಖ್ಯಕೇಂದ್ರವಾಗಿ ಬೆಳೆದಿದೆ. ಚಲನಚಿತ್ರೋತ್ಸವದಲ್ಲಿ ಪ್ರತಿ ವರ್ಷ 60ಕ್ಕೂ ದೇಶಗಳಿಂದ ಬಂದ ಸುಮಾರು 200ಕ್ಕೂ ಅಧಿಕ ಚಲನಚಿತ್ರಗಳನ್ನು, 13 ಚಿತ್ರಮಂದಿರಗಳಲ್ಲಿ, ಸುಮಾರು 400 ಪ್ರದರ್ಶನಗಳನ್ನು ಆಯೋಜಿಸಲಾಗುತ್ತಿದೆ. ಪ್ರತಿ ಆವೃತ್ತಿಯಲ್ಲಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ.

Comments (0)

Your email address will not be published. Required fields are marked *

Back to top button