Freedom TV

ಪರ್ಫ್ಯೂಮ್ ಫ್ಯಾಕ್ಟರಿಗೆ ಬೆಂಕಿ: ಮೂರು ಸಾವು, ಐವರಿಗೆ ಗಾಯ!

ಬೆಂಗಳೂರು : ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿ ಪರ್ಫ್ಯೂಮ್ ಫ್ಯಾಕ್ಟರಿ ಅಗ್ನಿ ಅವಘಡ ದಲ್ಲಿ ಮೂವರು ಕಾರ್ಮಿಕರು ದುರ್ಮರಣ ಹೊಂದಿರುವಂತಹ ದುರಂತ ಸಂಭವಿಸಿದೆ. ಬೆಂಕಿಯಲ್ಲಿ ಸಿಲುಕಿ ಮೂವರು ಕಾರ್ಮಿಕರು ಸಜೀವದಹನವಾಗಿದ್ದು, ಇನ್ನೂ ಕೆಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಪರ್ಫ್ಯೂಮ್ ಕೆಮಿಕಲ್‌ ಸ್ಫೋಟಗೊಂಡ ಪರಿಣಾಮ ಆಕಸ್ಮಿಕ ಬೆಂಕಿಯಿಂದ ಪರ್ಫ್ಯೂಮ್ ಫ್ಯಾಕ್ಟರಿ ಹೊತ್ತಿ ಉರಿದಿದೆ. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುತ್ತಿದ್ದಾರೆ.

ಈ ಘಟನೆಯಲ್ಲಿ ಗಂಭೀರ ಗಾಯಗೊಂಡ ಅಲ್ಲಾಭಕ್ಷ, ಅಫ್ರೋಜ್, ರಿಯಾಜ್, ಸಾಧಿಕ್, ಇಮ್ರಾನ್ರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮೂವರ ಮೃತದೇಹಗಳು ಆರ್.ಆರ್.ನಗರದ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಗ್ನಿ ದುರಂತ ಬಗ್ಗೆ ಕುಂಬಳಗೋಡು ಪೊಲೀಸರಿಂದ ತನಿಖೆ ಮುಂದುವರೆದಿದ್ದು, ಖಾಲಿ ಜಾಗದ ಶೆಡ್ನಲ್ಲಿ ಪರ್ಫ್ಯೂಮ್ ಕೆಮಿಕಲ್ ಫಿಲ್ಲಿಂಗ್ ಮಾಡಲಾಗುತ್ತಿತ್ತು. ಒಟ್ಟು 8 ಸಿಬ್ಬಂದಿ ಕೆಮಿಕಲ್ ಫಿಲ್ಲಿಂಗ್ ಮಾಡುತ್ತಿದ್ದ ಬಗ್ಗೆ ಮಾಹಿತಿ ಇದೆ.

ಫಿಲ್ಲಿಂಗ್ ವೇಳೆ ಸ್ಫೋಟಗೊಂಡು ಇಡೀ ಮನೆಗೆ ಬೆಂಕಿ ಆವರಿಸಿರುವ ಶಂಕೆ ವ್ಯಕ್ತವಾಗಿದೆ. ಅಗ್ನಿ ದುರಂತದಲ್ಲಿ 1 ಬೈಕ್, 1 ಕಾರು ಹಾಗೂ ಆಟೋ ಸಂಪೂರ್ಣ ಹಾನಿಯಾಗಿದ್ದು, ಬೆಂಕಿಯ ತೀವ್ರತೆಗೆ ಅಕ್ಕಪಕ್ಕದ ಮನೆಯ ವಸ್ತುಗಳು ಬೆಂಕಿಗಾಹುತಿ ಆಗಿದೆ.

Comments (0)

Your email address will not be published. Required fields are marked *

Back to top button