ಮೈಸೂರ: ಸಾಂಸ್ಕೃತಿಕ ನಗರಿ ಮೈಸೂರು ದಸರಾ ಇಂದು ಅದ್ದೂರಿಯಾಗಿ ಚಾಲನೆಯಾಗಿದೆ.ನಾಡ ದೇವತೆ ಚಾಮುಂಡೇಶ್ವರಿ ದೇವಿಯ ಸನ್ನಿಧಿಯಲ್ಲಿ 2025ರ ದಸರಾ ಮಹೋತ್ಸವಕ್ಕೆ ಸಾಹಿತಿ ಬಾನು ಮುಷ್ತಾಕ್ ಚಾಲನೆ ನೀಡಿದರು. ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾಗೆ ಚಾಲನೆ ನೀಡಿದರು.

ಈ ವೇಳೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಸಚಿವರು, ಶಾಸಕರು ಉಪಸ್ಥಿತರಿದ್ದರು. ಇನ್ನು ದಸರಾ ಉದ್ಘಾಟನೆಗೆ ಆಗಮಿಸಿದ ಬಾನು ಮುಷ್ತಾಕ್ ಚಾಮುಂಡಿ ತಾಯಿಯ ದರ್ಶನ ಪಡೆದು ಮಂಗಳಾರತಿ ಸ್ವೀಕರಿಸಿದ್ದಾರೆ.
ಹಸಿರು ಬಾರ್ಡರ್ ಇರುವ ಹಳದಿ ಮೈಸೂರು ರೇಷ್ಮೆ ಸೀರೆ, ತಲೆಗೆ ಮೈಸೂರು ಮಲ್ಲಿಗೆ ಮುಡಿದು ಸಿಎಂ ಸಿದ್ದರಾಮಯ್ಯ, ಸಚಿವರ ಜೊತೆ ಬಾನು ಮುಷ್ತಾಕ್ ದೇವಸ್ಥಾನಕ್ಕೆ ಆಗಮಿಸಿದರು. ಗರ್ಭಗುಡಿ ಮುಂಭಾಗದ ಆವರಣದಲ್ಲಿ ನಿಂತು ತಾಯಿ ಚಾಮುಂಡಿ ದರ್ಶನ ಪಡೆದರು. ನಂತರ ಗಣಪತಿಗೆ ಕೈ ಮುಗಿದು, ಮಂಗಳಾರತಿ ಪಡೆದು ಪ್ರಸಾದ ಸ್ವೀಕರಿಸಿದ್ದಾರೆ.


