Wednesday, April 30, 2025
32 C
Bengaluru
LIVE
ಮನೆ#Exclusive Newsಸಿಎಂ ಆಗಲು ಸಾವಿರಾರು ಕೋಟಿ ಹಣ ಇಟ್ಟುಕೊಂಡು ಕಾಯುತ್ತಿದ್ದಾರೆ:ಬಸನಗೌಡ ಯತ್ನಾಳ್

ಸಿಎಂ ಆಗಲು ಸಾವಿರಾರು ಕೋಟಿ ಹಣ ಇಟ್ಟುಕೊಂಡು ಕಾಯುತ್ತಿದ್ದಾರೆ:ಬಸನಗೌಡ ಯತ್ನಾಳ್

ದಾವಣಗೆರೆ:ಕೆಲವರು ಸಿಎಂ ಆಗಲು ಸಾವಿರಾರು ಕೋಟಿ ಹಣ ಇಟ್ಟುಕೊಂಡು ಕಾಯುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್  ಸ್ಫೋಟಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದರಲ್ಲಿ ಕಾಂಗ್ರೆಸ್​ನವರೂ ಇದ್ದಾರೆ, ಬೇರೆ ಪಕ್ಷದವರೂ ಇದ್ದಾರೆ. ಸಾವಿರ ಕೋಟಿ ಹಣ ಇಟ್ಟುಕೊಂಡು ಸಿಎಂ ಆಗಲು ಸಿದ್ಧರಿದ್ದಾರೆ ಎಂದು ಹೊಸ ಬಾಂಬ್​​ ಸಿಡಿಸಿದ್ದಾರೆ.

ಭ್ರಷ್ಟಾಚಾರ ನಡೆಸಿ ಸಾಕಷ್ಟು ದುಡ್ಡು ಮಾಡಿದ್ದಾರೆ​ ಎಂದು ಪರೋಕ್ಷವಾಗಿ ವಿಜಯೇಂದ್ರ ವಿರುದ್ಧ ಆರೋಪ ಮಾಡಿದ್ದಾರೆ. ನಾವು ಈಗ ಆಪರೇಷನ್ ಕಮಲ ಮಾಡುವ ಪ್ರಯತ್ನ ಮಾಡಲ್ಲ. ಮುಂದಿನ ದಿನಗಳಲ್ಲಿ ನಮಗೆ ಸಂಪೂರ್ಣ ಬಹುಮತ ಸಿಗಲಿದೆ. ಈ ಹಿಂದೆ ಕೆಲವರ ಬಳಿ ಹಣದ ಕೌಂಟಿಂಗ್ ಮಷೀನ್ ಸಿಕ್ಕಿವೆ. ವಿಜಯೇಂದ್ರ ಅವರು ನಮ್ಮ ತಂದೆಯಿಂದ ಸಂಸ್ಕಾರ ಸಿಕ್ಕಿದೆ ಎಂದಿದ್ದರು. ಅವರಿಗೆ ಚಿತ್ರದುರ್ಗದ ಮನೆಯೊಂದರಲ್ಲಿ ಸಂಸ್ಕಾರ ಸಿಕ್ಕಿದೆ ಎಂದು ವ್ಯಂಗ್ಯ ಆಡಿದ್ದಾರೆ.

ಬಿಜೆಪಿಯಲ್ಲಿ ಭಿನ್ನಮತ ಇದೆ. ಪಕ್ಷದ ಗೊಂದಲಗಳ ಬಗ್ಗೆ ಹೈಕಮಾಂಡ್​ಗೆ ಮಾಹಿತಿ ರವಾನೆ ಮಾಡಲಾಗಿದೆ. ಬಹಿರಂಗ ಹೇಳಿಕೆ ನೀಡದಂತೆ ಹೈಕಮಾಂಡ್ ಸೂಚಿಸಿದೆ. ಹೀಗಾಗಿ ನಾವು ಹೆಚ್ಚು ಮಾತಾಡಲ್ಲ. ಬಿಜೆಪಿ ರಾಜ್ಯಾಧ್ಯಕ್ಷರ ಬದಲಾಯಿಸುವ ಅಧಿಕಾರ ನಮಗಿಲ್ಲ. ಹೈಕಮಾಂಡ್​ ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತೆ. ಹೈಕಮಾಂಡ್ ಯಾವ ನಿರ್ಧಾರ ಕೈಗೊಳ್ಳುತ್ತೋ ಕಾದು ನೋಡುತ್ತೇವೆ ಎಂದು ಹೇಳಿದ್ದಾರೆ.

ದಾವಣಗೆರೆ ನಗರದಲ್ಲಿ ಬಿಜೆಪಿ ಬಂಡಾಯ ನಾಯಕರ ಸಭೆ ವಿಚಾರವಾಗಿ ಮಾತನಾಡಿದ ಅವರು, ಸದ್ಯಕ್ಕೆ ಪಕ್ಷದ ಬಗ್ಗೆ ಯಾವುದೇ ಚರ್ಚೆ ನಡೆಯಲ್ಲ. ಕುಮಾರ ಬಂಗಾರಪ್ಪ ಮನೆಯಲ್ಲಿ ಸಭೆ ಮಾಡಿದಾಗಲೇ ನಿರ್ಧರಿಸಲಾಗಿದೆ. ಏನು ಮಾಡಬೇಕೆಂದು ಹಿಂದಿನ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments