ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಯ್ಯದ್ ನಾಸೀರ್ ಹುಸೇನ್ ಅವರ ಗೆಲುವಿನ ಸಂದರ್ಭದಲ್ಲಿ ಅವರ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದವರನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಕೂಗಿದ್ದಾರೆ. ಇದು ಪಾಕಿಸ್ತಾನ ಬೆಂಬಲಿಗರಿಗೆ ಕಾಂಗ್ರೆಸ್ ಪಕ್ಷದ ಸಹಾಯ, ಬೆಂಬಲ ಇದೆ ಎಂಬುದನ್ನು ತೋರಿಸುತ್ತದೆ.ವಿಧಾನಸಭೆ ಚುನಾವಣೆ ಗೆಲುವಿನ ಸಂದರ್ಭದಲ್ಲೂ ಬೆಳಗಾವಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿ ಪಾಕಿಸ್ತಾನದ ಧ್ವಜ ಹಾರಿಸಿದ್ದರು.
ದೇಶದ್ರೋಹಿಗಳಿಗೆ ವಿಧಾನಸಭೆಯಲ್ಲಿ ಜಾಗ ಕೊಟ್ಟಿರುವುದು ಆತಂಕಕಾರಿ ಬೆಳವಣಿಗೆ, ಈ ವಿಷಯ ಅತ್ಯಂತ ಗಂಭೀರವಾಗಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಕೂಡಲೇ ಸರ್ಕಾರ ತಪ್ಪಿಸ್ಥರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.