Thursday, May 1, 2025
28.8 C
Bengaluru
LIVE
ಮನೆ#Exclusive NewsTop Newsಗ್ಯಾರಂಟಿಗೆ 65 ಸಾವಿರ ಕೋಟಿ ಹಣ ಬೇಕು, ಅಭಿವೃದ್ಧಿಗೆ ಹಣ ಇಲ್ಲ – ಸಿಎಂ ಆರ್ಥಿಕ...

ಗ್ಯಾರಂಟಿಗೆ 65 ಸಾವಿರ ಕೋಟಿ ಹಣ ಬೇಕು, ಅಭಿವೃದ್ಧಿಗೆ ಹಣ ಇಲ್ಲ – ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ

ಕೊಪ್ಪಳ: ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಅನುಷ್ಠಾನ ಮಾಡಿರುವ ಪಂಚ ಗ್ಯಾರಂಟಿ ಯೋಜನೆಗೆ  60 ರಿಂದ 65 ಸಾವಿರ ಕೋಟಿ ಹಣ ಬೇಕು. ಇದರಿಂದ ಬೇರೆ ಯೋಜನೆಗಳಿಗೆ ಅನುದಾನ ಇಲ್ಲ.‌ ಯಾವಾಗಲೂ ಸಿಎಂ ಜೊತೆಗೆ ಇರುವ ನನಗೆ ಮಾತ್ರ ಒಳಗಿನ ಸಮಸ್ಯೆ ಗೊತ್ತಿದೆ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.

ಕೊಪ್ಪಳದ‌ ಕುಕನೂರು ತಾಲೂಕಿನ ಮಂಗಳೂರು ಗ್ರಾಮದಲ್ಲಿ ಕೆರೆ ತುಂಬಿಸುವ ಯೋಜನೆಗೆ ಕೆರೆ ನಿರ್ಮಾಣಕ್ಕೆ ಭೂಮಿ ಪಡೆಯಲು ಆಯೋಜಿಸಿದ್ದ ರೈತರು ಮತ್ತು ಗ್ರಾಮಸ್ಥರ ಸಭೆಯಲ್ಲಿಂದು ಅವರು ಮಾತನಾಡಿದರು.

ಹಣಕಾಸಿನ ಕೊರತೆಯಿಂದ ರಾಜ್ಯದ ಯಾವುದೇ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ನಡೆಯುತ್ತಿಲ್ಲ. ನಾನು ಕೆರೆ ತುಂಬಿಸುವ ಯೋಜನೆಗೆ ಬರೋಬ್ಬರಿ 970 ಕೋಟಿ ರೂ. ಅನುದಾನ ತಂದಿದ್ದೇನೆ. ಆದರೆ, ಕಾಮಗಾರಿಗೆ ಅಗತ್ಯ ಭೂಮಿ ನೀಡಲು ಯಾರೂ ಮುಂದೆ ಬರುತ್ತಿಲ್ಲ. ರಾಜ್ಯದ ಯಾವುದೇ ವಿಧಾನಸಭೆ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ.‌ ತುಂಬಾ ಕ್ಷೇತ್ರದ ಶಾಸಕರು ಅಭಿವೃದ್ಧಿಗೆ ಅನುದಾನ ಕೇಳುತ್ತಿದ್ದಾರೆ. ಆದರೆ, ಸಿಎ ಯಾರಿಗೂ ಅನುದಾನ ನೀಡಿಲ್ಲ ಎಂದು ಹೇಳಿದರು.

ನಮ್ಮ ಕ್ಷೇತ್ರಕ್ಕೆ ಮಾತ್ರ ಹಣ ಬಂದಿದೆ. ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ತುಂಬಾ ಕಷ್ಟ ಆಗುತ್ತಿದೆ. ಸಿಎಂ ನನ್ನನ್ನು ತಮ್ಮ ಆರ್ಥಿಕ ಸಲಹೆಗಾರನಾಗಿ ಮಾಡಿಕೊಂಡಿದ್ದಾರೆ. ದಿನನಿತ್ಯ ಅವರ ಜೊತೆಯಲ್ಲೇ ಇರುವುದರಿಂದ ನನ್ನ ಕ್ಷೇತ್ರಕ್ಕೆ ಮಾತ್ರ ಹಣ ಬಂದಿದೆ. ರಾಜ್ಯದಲ್ಲಿ ಇದು ಒಂದೇ ಕೆಲಸ ಆಗುತ್ತಿದೆ. ಹಣಕಾಸಿನ ಆಂತರಿಕ ವಿಚಾರ, ನನಗೆ ಮಾತ್ರ ಗೊತ್ತಿದೆ.‌ ಇದನ್ನು ಕ್ಷೇತ್ರದ ಜನರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments