ರಾಜ್ಯಸುದ್ದಿ

ಪ್ರೀತಿಸುವಂತೆ ಯುವಕನಿಂದ ಕಿರುಕುಳ: ಬಿಬಿಎ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು: ಪ್ರೀತಿಸುವಂತೆ ಯುವಕ ಕಿರುಕುಳ ನೀಡುತ್ತಿದ್ದ ಕಾರಣಕ್ಕೆ 19 ವರ್ಷದ ಬಿಬಿಎ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬಾಗಲೂರು ಖಾಸಗಿ ಪಿಜಿಯಲ್ಲಿ ನಡೆದಿದೆ..

ಸನಾ ಪರ್ವಿನ್​​​ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ.. ಸನಾ ಪರ್ವಿಸ್​​ ಎಂಬ ವಿದ್ಯಾರ್ಥಿನಿ ಬಾಗಲೂರಿನ ಖಾಸಗಿ ಕಾಲೇಜಿನಲ್ಲಿ ಬಿಬಿಎ ಓದುತ್ತಿದ್ದಳು. ಅದೇ ಕಾಲೇಜಿನಲ್ಲಿ ಓದುತ್ತಿದ್ದ ರಿಫಾಸ್ ಎಂಬ ಯುವಕ ಪ್ರೀತಿಸುವಂತೆ ನಿರಂತರ ಕಿರುಕುಳ ಹಾಗೂ ಬೆದರಿಕೆಯಿಂದ ಸನಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಲಾಗಿದೆ.

ಸನಾ ಪರ್ವಿನ್‌ ಮಡಿಕೇರಿ ಮೂಲದ ಯುವತಿ. ಈಕೆಗೆ ಕೇರಳದ ಮೂಲದ ಯುವಕ, ಪಿಜಿ ಮತ್ತು ಕಾಲೇಜು ಬಳಿ ಬಂದು ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ. ಅಸಭ್ಯವಾಗಿ ಮೆಸೇಜ್‌ ಮಾಡುತ್ತಿದ್ದ. ಕಳೆದ 10 ತಿಂಗಳಿಂದ ಆಕೆಗೆ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ.

ಯುವಕನ ಕಿರುಕುಳದ ವಿಚಾರವನ್ನು ಯುವತಿ ತನ್ನ ಪೋಷಕರಿಗೂ ತಿಳಿಸಿದ್ದಳು. ಆದರೆ, ನಿನ್ನೆ ರಾತ್ರಿ ತನ್ನ ಪಿಜಿ ಸಹಪಾಠಿಗಳು ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ. ಈ ಸಂಬಂಧ ಬಾಗಲೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

Comments (0)

Your email address will not be published. Required fields are marked *

Back to top button