ಬೆಂಗಳೂರು : ಭೂಗಳ್ಳರಿಗೆ ಬಿಬಿಎಂಪಿ ಶಾಕ್ ನೀಡಿದ್ದು, 85 ಕೋಟಿ ಮೌಲ್ಯದ ಪಾಲಿಕೆ ಆಸ್ತಿ ವಶ ಪಡಿಸಿಕೊಂಡಿದೆ. ಯಲಹಂಕ ವಲಯ ಬ್ಯಾಟರಾಯನಪುರ ವಿಭಾಗದ ಕೊಡಿಗೇಹಳ್ಳಿ ವಾರ್ಡ್ ವ್ಯಾಪ್ತಿಯ ಕೋತಿಹೊಸಹಳ್ಳಿ ಗ್ರಾಮದ ಸರ್ವೆ ಸಂಖ್ಯೆ 52ರಲ್ಲಿ ಭೂ ಒತ್ತುವರಿ ಆಗಿತ್ತು. ಈ ಹಿನ್ನೆಲೆಯಲ್ಲಿ ಒತ್ತುವರಿ ಮಾಡಿಕೊಂಡಿದ್ದ ಸುಮಾರು 85 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಪಾಲಿಕೆ ವಶಪಡಿಸಿಕೊಂಡಿದೆ.

ಬ್ಯಾಟರಾಯನಪುರ ವಿಭಾಗದ ಕೊಡಿಗೇಹಳ್ಳಿ ವಾರ್ಡ್ ವ್ಯಾಪ್ತಿಯ ಕೋತಿಹೊಸಹಳ್ಳಿ ಗ್ರಾಮದ ಸರ್ವೆ ಸಂಖ್ಯೆ 52ರಲ್ಲಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಜಾಗದಲ್ಲಿ ಕೆಲವು ವ್ಯಕ್ತಿಗಳು ಅತಿಕ್ರಮಣ ಮಾಡಿಕೊಂಡಿದ್ರು. ಅಲ್ಲಿ ಶೆಡ್‌ಗಳನ್ನು ನಿರ್ಮಿಸಿಕೊಂಡು ವಾಣಿಜ್ಯ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿದ್ದರು. ಈ ಹಿನ್ನಲೆಯಲ್ಲಿ ಬಿಬಿಎಂಪಿಯ ಯಲಹಂಕ ವಲಯದ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿಯ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ ನಡೆಸಿದ್ರು.

ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ 4 ಜೆ.ಸಿ.ಬಿ, 6 ಟಿಪ್ಪರ್‌ಗಳು, 12 ಟ್ರಾಕ್ಟರ್‌ಗಳು, 140 ಪೊಲೀಸ್ ಸಿಬ್ಬಂದಿ, 70 ಜನ ಕಾರ್ಮಿಕರು ಸಹಾಯದೊಂದಿಗೆ ಕಾರ್ಯಾಚರಣೆ ನಡೀತು.  ಪಾಲಿಕೆ ವಶಕ್ಕೆ ಪಡೆದಿದ್ದು,  ಸಂಪೂರ್ಣ ಜಾಗಕ್ಕೆ ಚೈನ್‌ಲಿಂಕ್ ಫೆನ್ಸಿಂಗ್ ಅಳವಡಿಸುವ ಕಾರ್ಯ ಪ್ರಗತಿಯಲ್ಲಿದ್ದು, ತ್ವರಿತಗತಿಯಲ್ಲಿ ಫೆನ್ಸಿಂಗ್ ಕಾರ್ಯವನ್ನು ಪೂರ್ಣಗೊಳಿಸಲು ಪಾಲಿಕೆ ನಿರ್ಧರಿಸಿದೆ.

https://youtu.be/Xe0VbbKfzqs?si=Jr_EcqYrsK2CWG31

By admin

Leave a Reply

Your email address will not be published. Required fields are marked *

Verified by MonsterInsights