ಚಿನ್ನಸ್ವಾಮಿ ಸ್ಟೇಡಿಯಂ ಮುಂಭಾಗದಲ್ಲಿರುವ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಸಹ ಮಾಲೀಕತ್ವದ ಒನ್ 8 ಕಮ್ಯೂನ್ (One And Commune) ಬಾರ್ & ರೆಸ್ಟೋರೆಂಟ್‌ಗೆ ಬಿಬಿಎಂಪಿ ಬಿಸಿ ಮುಟ್ಟಿಸಿದೆ.
ಅಗ್ನಿ ಶಾಮಕ ದಳದಿಂದ ನಕ್ಷೆ, ಪ್ರಮಾಣ ಪತ್ರ ಎನ್‌ಒಸಿ ಪರವಾನಿಗೆ ಪಡೆಯದೇ ಕಾನೂನು ಉಲ್ಲಂಘನೆ ಮಾಡಿದ್ದಕ್ಕೆ ನೋಟಿಸ್ ನೀಡಿದೆ. ಸಾಮಾಜಿಕ ಕಾರ್ಯಕರ್ತ ಹೆಚ್.ಎಂ ವೆಂಕಟೇಶ್ ಅನ್ನೋರು ಈ ಬಗ್ಗೆ ಬಿಬಿಎಂಪಿಗೆ ದೂರು ಕೊಟ್ಟಿದ್ದರು. ಇದನ್ನು ಆಧರಿಸಿ ಶಾಂತಿನಗರದ ಬಿಬಿಎಂಪಿ ಆರೋಗ್ಯ ವಿಭಾಗದ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ಈಗಾಗಲೇ ಒಂದು ಬಾರಿ ನೋಟಿಸ್ ನೀಡಿದ್ರೂ ಕೊಹ್ಲಿ ಮಾಲೀಕತ್ವದ ಬಾರ್ ಆಂಡ್ ರೆಸ್ಟೋರೆಂಟ್‌ನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಮತ್ತೆ ನೋಟಿಸ್ ಜಾರಿ ಮಾಡಿ, ಲಿಖಿತ ಸಮಜಾಯಿಷಿ ಕೇಳಿದೆ. ಉತ್ತರ ನೀಡದೇ ಇದ್ದಲ್ಲಿ ಕಾನೂನು ಕ್ರಮದ ಎಚ್ಚರಿಕೆ ನೀಡಿದೆ.
ಈಗಾಗಲೇ ಬೆಂಗಳೂರಿನಲ್ಲಿ ಅಗ್ನಿಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೇ ಅನೇಕ ದುರಂತಗಳು ನಡೆದಿದೆ. ಹೀಗಿರುವಾಗ ಈ ರೀತಿ ರೂಲ್ಸ್ ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ ಅಗತ್ಯವಾಗಿದೆ.