ಬೆಂಗಳೂರು, ಜುಲೈ.07: ಮುಂಬೈನಲ್ಲಿ ನಡೆದ ಹೋರ್ಡಿಂಗ್ಸ್ ದುರಂತ ಬಳಿಕವೂ ಬೆಂಗಳೂರಿನಲ್ಲಿ ಎಚ್ಚೆತ್ತುಕೊಂಡಿಲ್ಲ. ಬಿಬಿಎಂಪಿ ನಿರ್ಲಕ್ಷ್ಯಕ್ಕೆ ವ್ಯಕ್ತಿಯೊಬ್ಬರ ಜೀವಕ್ಕೆ ಆಪತ್ತು ಬಂದಿದೆ. ಅನಧಿಕೃತ ಫ್ಲೆಕ್ಸ್ ತಲೆ ಮೇಲೆ ಬಿದ್ದು ವೃದ್ಧನಿಗೆ ಗಂಭೀರ ಗಾಯವಾಗಿದ್ದು ತೀವ್ರ ರಕ್ತಸ್ರಾವವಾಗಿ 70 ವರ್ಷದ ಭಕ್ತವತ್ಸಲ ಎಂಬ ವೃದ್ಧ ಕೋಮಾಗೆ ಜಾರಿದ್ದಾರೆ. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.
ನಿನ್ನೆ ಯಲಹಂಕದ ಸಿಂಗನಾಯಕನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ರಾಜಾನುಕುಂಟೆಯ ನಿವಾಸಿಯಾಗಿರುವ ಭಕ್ತವತ್ಸಲ ಎಂಬುವವರು ಮೊಮ್ಮಗಳನ್ನ ಶಾಲೆಯಿಂದ ಕರೆದುಕೊಂಡು ಬರಲು ಬೈಕ್ ಚಲಾಯಿಸಿಕೊಂಡು ಹೋಗ್ತಿದ್ದ ವೇಳೆ ಅನಧಿಕೃತ ಫ್ಲೆಕ್ಸ್ ತಲೆ ಮೇಲೆ ಬಿದ್ದಿದೆ. ಇದರಿಂದ ತೀವ್ರ ರಕ್ತಸ್ರಾವವಾಗಿದ್ದು ಕೋಮಾಗೆ ಜಾರಿದ್ದಾರೆ. ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಹುಟ್ಟುಹಬ್ಬಕ್ಕೆ ಶುಭಕೋರಿ ಹಾಕಿದ್ದ ಬೃಹತ್ ಗಾತ್ರದ ಫ್ಲೆಕ್ಸ್ ಬಿದ್ದಿದೆ ಎಂದು ತಿಳಿದು ಬಂದಿದೆ.
ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com