ಬೆಂಗಳೂರು : ರಾಕ್ ಲೈನ್ ಮಾಲ್ ನಿಂದ 2011 ರಿಂದ 2022-23 ರವರೆಗೆ ಬಾಕಿ ಉಳಿಸಿಕೊಂಡಿರುವ 11.51 ಕೋಟಿ ರೂ. ಆಸ್ತಿ ತೆರಿಗೆ ಬಾಕಿ ಹಿನ್ನಲೆಯಲ್ಲಿ ಮಾಲ್ ಸೀಜ್ ಮಾಡಿದ ಪಾಲಿಕೆ ಅಧಿಕಾರಿಗಳು.
ಪಾಲಿಕೆ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಒಡೆತನದ ರಾಕ್ ಲೈನ್ ಮಾಲ್ 11.51 ಕೋಟಿ ರೂ.ನಷ್ಟು ತೆರಿಗೆ ಬಾಕಿ ಉಳಿಸಿಕೊಂಡ ಹಿನ್ನಲೆಯಲ್ಲಿ ಮಾಲ್ ಪ್ರವೇಶದ್ವಾರಕ್ಕೆ ಬಿಬಿಎಂಪಿ ಕಂದಾಯ ಅಧಿಕಾರಿಗಳು ಮಾರ್ಷಲ್ಗಳ ಭದ್ರತೆಯೊಂದಿಗೆ ತೆರಳಿ ಬೀಗ ಹಾಕಿ ಸೀಲ್ ಮಾಡಿದ್ದಾರೆ.
ರಾಕ್ ಲೈನ್ ಮಾಲ್ ನಿಂದ 2011 ರಿಂದ 2022-23 ರವರೆಗೆ ಬಾಕಿ ಉಳಿಸಿಕೊಂಡಿರುವ 11.51 ಕೋಟಿ ರೂ. ಆಸ್ತಿ ತೆರಿಗೆಯನ್ನು ಪಾಲಿಕೆಗೆ ಪಾವತಿಸಬೇಕಿದೆ. ಬಾಕಿ ತೆರಿಗೆ ಪಾವತಿಸಲು ಈಗಾಗಲೇ ಡಿಮಾಂಡ್ ನೋಟೀಸ್ ನೀಡಿದ್ದರು. ತೆರಿಗೆಯನ್ನು ಪಾವತಿಸಿರಲಿಲ್ಲ. ಈ ಹಿನ್ನಲೆಯಲ್ಲಿ ದಾಸರಹಳ್ಳಿ ವಲಯ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ರಾಕ್ ಲೈನ್ ಮಾಲ್ಅನ್ನು ಸೀಜ್ ಮಾಡಲಾಗಿದೆ.
ಸ್ಥಳದಲ್ಲಿ ವಲಯ ಆಯುಕ್ತರಾದ ಪ್ರೀತಿ ಗೆಹ್ಲೋಟ್ , ವಲಯ ಹೆಚ್ಚುವರಿ ಆಯುಕ್ತರಾದ ಬಾಲಶೇಖರ್, ಕಂದಾಯ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ , ಮಾರ್ಷಲ್ಗಳು ಸೇರಿದಂತೆ ಇನ್ನಿತರು ಉಪಸ್ಥಿತರಿದ್ದರು.
https://youtu.be/NWCrXRCviX4?si=ZbStdMUxKSdM8YSL