Tuesday, January 27, 2026
26.9 C
Bengaluru
Google search engine
LIVE
ಮನೆ#Exclusive NewsTop Newsಐಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟ ಜಯ್‌ ಶಾ?

ಐಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟ ಜಯ್‌ ಶಾ?

ಮುಂಬೈ: ಹಾಲಿ ಬಿಸಿಸಿಐ ಕಾರ್ಯದರ್ಶಿಯಾಗಿರುವ  ಜಯ್‌ ಶಾ ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ  ಮುಂದಿನ ಅಧ್ಯಕ್ಷರ ಆಯ್ಕೆಗೆ ಈ ವರ್ಷದ ನವೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ. ಸದ್ಯ ನ್ಯೂಜಿಲೆಂಡ್‌ನ ಗ್ರೆಗ್ ಬಾರ್ಕ್ಲೇ ನಾಲ್ಕು ವರ್ಷಗಳಿಂದ ಅಧಿಕಾರದಲ್ಲಿದ್ದು ಮತ್ತೊಂದು ಅವಧಿಗೆ ಅರ್ಹರಾಗಿದ್ದಾರೆ.

ಈ ಚುನಾವಣೆಯಲ್ಲಿ ಜಯ್ ಶಾ ಅವರು ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಒಂದು ವೇಳೆ ಈ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದರೆ ಈ ಹುದ್ದೆಯನ್ನು ಅಲಂಕರಿಸಿದ್ದ ಅತ್ಯಂತ ಕಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಜಯ್‌ ಶಾ ಪಾತ್ರವಾಗಲಿದ್ದಾರೆ.

ಐಸಿಸಿ ವಾರ್ಷಿಕ ಸಭೆ ಈ ಜುಲೈನಲ್ಲಿ ಕೊಲಂಬೋದಲ್ಲಿ ನಡೆಯಲಿದೆ. ಐಸಿಸಿ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಇಲ್ಲಿಯವರೆಗೆ ಜಯ್‌ ಶಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಅವರು ಐಸಿಸಿ ಕಾರ್ಯಚಟುವಟಿಕೆಗಳಲ್ಲಿ ಬದಲಾವಣೆಗಳನ್ನು ತರಲು ಬಯಸಿದ್ದಾರೆ ಎಂದು ವರದಿಯಾಗಿದೆ.

 

ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments