ಬೆಳಗಾವಿ: ಬ್ಯೂಟಿ ಪಾರ್ಲರ್ ಮತ್ತು ಸ್ಟೇಷನರಿ ಶಾಪ್ ಗೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡ ಘಟನೆ ಬೆಳಗಾವಿಯ ಮಾರುತಿ ಗಲ್ಲಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಅನ್ವರ್ ಸೇಠ್ ಎಂಬುವವರಿಗೆ ಸೇರಿದ ಮಳಿಗೆ ಬೆಂಕಿಗೆ ಆಹುತಿಯಾಗಿದೆ.
ಮಂಗಳವಾರ ಎನ್ನುವ ಕಾರಣಕ್ಕೆ ಮಳಿಗೆಗಳು ಬಂದ್ ಆಗಿದ್ದ ಹಿನ್ನೆಲೆಯಲ್ಲಿ ಹೆಚ್ಚಿನ ಅನಾಹುತ ಸಂಭವಿಸಿಲ್ಲ.. ಹೆವಿ ಲೈಟ್ ಬಳಕೆಯೇ ಶಾರ್ಟ್ ಸರ್ಕ್ಯೂಟ್ ಗೆ ಕಾರಣ ಎಂಬ ಶಂಕೆ ವ್ಯಕ್ತವಾಗುತ್ತಿದೆ. ಲಕ್ಷ್ಯಾಂತರ ಮೌಲ್ಯದ ಬ್ಯೂಟಿ ವರ್ಧಕ, ಸ್ಟೇಷನರಿ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿ ತಗುಲಿರುವ ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.