#Exclusive NewsTop Newsಜಿಲ್ಲೆಸುದ್ದಿ

ಬೆಳಗಾವಿ ಸಮಾವೇಶ : ಮೃತ ಕೆಂಚಪ್ಪ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ; ಡಿ ಕೆ ಶಿವಕುಮಾರ್

ಬೆಳಗಾವಿ :  ಬೆಳಗಾವಿಯ “ಜೈ ಬಾಪು ಜೈ ಭೀಮ್ ಜೈ ಸಂವಿಧಾನ” ಸಮಾವೇಶಕ್ಕೆ ಆಗಮಿಸಿದ್ದಾಗ ಹೃದಯಘಾತದಿಂದ ಮೃತಪಟ್ಟ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕಿನ ನದಿಹರ್ಲಳ್ಳಿಯ ಬಸಪ್ಪ ಕೆಂಚಪ್ಪ ಪಾಮೆನಳ್ಳಿ ಅವರ ಕುಟುಂಬಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಕೆಪಿಸಿಸಿ ವತಿಯಿಂದ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಬೆಳಗಾವಿಯಲ್ಲಿ ಜನವರಿ 21 ರಂದು ನಡೆದ ಸಮಾವೇಶದಲ್ಲಿ ಸುಮಾರು 60 ವರ್ಷ ವಯಸ್ಸಿನ ಬಸಪ್ಪ ಅವರು ಕುಸಿದು ಬಿದ್ದು ಮೃತಪಟ್ಟಿದ್ದರು.

ಬಸಪ್ಪ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಡಿ ಕೆ ಶಿವಕುಮಾರ್ ಅವರು, ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರಿಗೆ ಭಗವಂತ ನೀಡಲಿ ಎಂದು ತಿಳಿಸಿದ್ದಾರೆ.

Comments (0)

Your email address will not be published. Required fields are marked *

Back to top button