Top Newsರಾಜಕೀಯರಾಜ್ಯಸುದ್ದಿ

ಬೆಳಗಾವಿ ಚಳಿಗಾಲ ಅಧಿವೇಶನ : ಅಂಬೇಡ್ಕರ್ ಭಾವ ಚಿತ್ರ ಪ್ರದರ್ಶಿಸಿ, ಅಮಿತ್ ಶಾಗೆ ಧಿಕ್ಕಾರ ಕೂಗಿದ ಕಾಂಗ್ರೆಸ್ ಶಾಸಕರು

ಬೆಳಗಾವಿ: ಅಂಬೇಡ್ಕರ್ ವಿರುದ್ಧ ಹೇಳಿಕೆ ಹಿನ್ನೆಲೆ ಕರ್ನಾಟಕ ವಿಧಾನಸಭೆ ಹಾಗೂ ಪರಿಷತ್ ಕಲಾಪದಲ್ಲಿ ಕಾಂಗ್ರೆಸ್ ಶಾಸಕರು ಅಂಬೇಡ್ಕರ್ ಭಾವ ಚಿತ್ರ ಪ್ರದರ್ಶಿಸಿ, ಗೃಹ ಸಚಿವ ಅಮಿತ್ ಶಾ ವಿರುದ್ಧ ಧಿಕ್ಕಾರ ಕೂಗಿದರು.

ಇಂದು ವಿಧಾನಸಭೆಯ ಕಲಾಪ ಆರಂಭವಾಗುತ್ತಿದ್ದಂತೆ ಅಮಿತ್‌ ಶಾ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿ ಚರ್ಚೆಗೆ ಆಗ್ರಹಿಸಿದರು. ಸದನದಲ್ಲಿ ನಿರ್ಣಯ ಕೈಗೊಳಲು ಒತ್ತಾಯಿಸಿದರು. ಸದನದಲ್ಲಿ ಒಟ್ಟಾಗಿ ನಿಂತು ಅಂಬೇಡ್ಕರ್ ಫೊಟೋ ಹಿಡಿದು ಕಾಂಗ್ರೆಸ್ ಸದಸ್ಯರು ಧಿಕ್ಕಾರ ಕೂಗಿದರು. ಈ ಸಂದರ್ಭದಲ್ಲಿ ಬಿಜೆಪಿಯವರು ಕಾಂಗ್ರೆಸ್‌ನಿಂದಲೇ ಅಂಬೇಡ್ಕರ್‌ ಅವರಿಗೆ ಅನ್ಯಾಯವಾಗಿದೆ ಎಂದು ಹೇಳಿ ಪ್ರತಿಭಟಿಸಿದರು.

ಈ ವೇಳೆ ಕಾಂಗ್ರೆಸ್ ಸದಸ್ಯರು ಸದನದಲ್ಲಿ ಪ್ರದರ್ಶಿಸಿದ ಅಂಬೇಡ್ಕರ್ ಭಾವಚಿತ್ರವನ್ನೇ ತೆಗೆದುಕೊಂಡು ಕಾಂಗ್ರೆಸ್ ವಿರುದ್ಧವೇ ಬಿಜೆಪಿ ಶಾಸಕ ಗುರುರಾಜ್ ಗಂಟಿಹೊಳೆ‌ ಪ್ರದರ್ಶಿಸಿದರು. ಗದ್ದಲ, ಕೋಲಾಹಲ ಜೋರಾಗುತ್ತಿದ್ದಂತೆ ಸ್ಪೀಕರ್‌ ಹತ್ತು ನಿಮಿಷ ಕಲಾಪವನ್ನು ಮುಂದೂಡಿದರು.

Comments (0)

Your email address will not be published. Required fields are marked *

Back to top button