Tuesday, June 24, 2025
26.6 C
Bengaluru
Google search engine
LIVE
ಮನೆ#Exclusive NewsTop Newsನಡು ರಸ್ತೆಯಲ್ಲೇ ಹೊತ್ತಿ ಉರಿದ ಬಿಎಂಟಿಸಿ ಬಸ್

ನಡು ರಸ್ತೆಯಲ್ಲೇ ಹೊತ್ತಿ ಉರಿದ ಬಿಎಂಟಿಸಿ ಬಸ್

ಬೆಂಗಳೂರು: ರಸ್ತೆ ಮಧ್ಯೆಯೇ ಬಿಎಂಟಿಸಿ ಬಸ್ ಹೊತ್ತಿ ಉರಿದ ಘಟನೆ ಎಮ್‍ಜಿ ರಸ್ತೆಯ ಅನಿಲ್ ಕುಂಬ್ಳೆ ಸರ್ಕಲ್ ಬಳಿ ನಡೆದಿದೆ.

ಬಸ್ ರೋಸ್ ಗಾರ್ಡನ್‍ನಿಂದ ಶಿವಾಜಿನಗರದ ಕಡೆಗೆ ಹೋಗುತ್ತಿತ್ತು. ಈ ವೇಳೆ ಬಸ್‍ನ ಇಂಜಿನ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಚಾಲಕ ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಬಸ್‍ನಲ್ಲಿ 30 ಜನ ಪ್ರಯಾಣಿಕರಿದ್ದರು ಎಂದು ಬಸ್‍ನ ನಿರ್ವಾಹಕ ತಿಳಿಸಿದ್ದಾರೆ.

ಸ್ಥಳ್ಕಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬಳಿಕ ಪೊಲೀಸರು ಉಂಟಾಗಿದ್ದ ಟ್ರಾಫಿಕ್ ಜಾಮ್ ಕ್ಲಿಯರ್ ಮಾಡಿದ್ದು, ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ.

ಸ್ಥಳಕ್ಕೆ ಆಗಮಿಸಿರುವ ಬಿಎಂಟಿಸಿ ಸಿಬ್ಬಂದಿ ಹಾಗೂ ಮೆಕ್ಯಾನಿಕ್‍ಗಳು ಬೆಂಕಿಗಾಹುತಿಯಾದ ಬಸ್‍ನ್ನು ಪರಿಶೀಲನೆ ನಡೆಸುತ್ತಿದ್ದಾರೆ.

 

ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments