ಬೆಂಗಳೂರು: ನಟ ದರ್ಶನ್‌ ಮತ್ತು ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 57ನೇ ಸಿಸಿಎಚ್‌ ನ್ಯಾಯಾಲಯ ವಜಾಗೊಳಿಸಿದೆ. ಆದರೆ ಪ್ರಕರಣದ A13 ಆರೋಪಿ ದೀಪಕ್‌ಗೆ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

ಎರಡೂ ಕಡೆಯವರ ವಾದ–ಪ್ರತಿವಾದ ಆಲಿಸಿದ ನ್ಯಾಯಾಧೀಶ ಜೈಶಂಕರ್ ಅವರು ಅ.10 ರಂದು ವಿಚಾರಣೆ ಪೂರ್ಣಗೊಳಿಸಿ ಅ. 14ಕ್ಕೆ ಜಾಮೀನು ಅರ್ಜಿಗೆ ಸಂಬಂಧಿಸಿದ ಆದೇಶ ಪ್ರಕಟಿಸುವುದಾಗಿ ತಿಳಿಸಿದ್ದರು.

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್​ ಅವರು ಜೂನ್ 11ರಂದು ಅರೆಸ್ಟ್ ಆದರು. ಆ ಬಳಿಕ ಅವರನ್ನು ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ಇಡಲಾಗಿತ್ತು. ಆದರೆ, ಅಲ್ಲಿ ಅವರು ಐಷಾರಾಮಿ ವ್ಯವಸ್ಥೆ ಪಡೆದ ಕಾರಣಕ್ಕೆ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಯಿತು. ಈಗ ಈ ತೀರ್ಪಿನಿಂದ ಅವರು ಬಳ್ಳಾರಿ ಜೈಲಲ್ಲೇ ಇರಬೇಕಾಗಿದೆ.

ಜಾಮೀನು ಸಿಗದಿರೋ ಕಾರಣ ಅನಾರೋಗ್ಯ ಕಾರಣ ನೀಡಿ ದರ್ಶನ್ ಬೆಂಗಳೂರಿಗೆ ಶಿಫ್ಟ್​ ಆಗುವ ಸಾಧ್ಯತೆ ಇದೆ. ಈಗಾಗಲೇ ದರ್ಶನ್ ಕುಟುಂಬಸ್ಥರು ಮೆಡಿಕಲ್ ವರದಿ ಸಿದ್ಧ ಮಾಡಿಕೊಂಡಿದ್ದಾರೆ. ಅನಾರೋಗ್ಯದ ಕಾರಣ ನೀಡಿ ಬೆಂಗಳೂರಿಗೆ ಶಿಫ್ಟ್​ ಆಗಲು ಪ್ಲ್ಯಾನ್​ ನಡೆದಿದೆ. ದರ್ಶನ್ ಕಳೆದ ಕೆಲ ದಿನಗಳಿಂದ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ನಡೆಯಲು ಕೂಡ ಅವರಿಗೆ ಕಷ್ಟ ಆಗುತ್ತಿದೆ ಎನ್ನಲಾಗಿದೆ.

ದರ್ಶನ್ ಪರ ಸಿವಿ ನಾಗೇಶ್ ಅವರು ವಾದ ಮಂಡನೆ ಮಾಡಿದ್ದರು. ದರ್ಶನ್ ವಿರುದ್ಧ ಸಾಕ್ಷಿಗಳನ್ನು ಸೃಷ್ಟಿಸಲಾಗಿದೆ ಎಂದು ವಾದ ಮಂಡಿಸಿದ್ದರು. ಇದಕ್ಕೆ ಸರ್ಕಾರಿ ವಕೀಲ ಪ್ರಸನ್ನ ಕುಮಾರ್ ಅವರು ಕೌಂಟರ್ ಕೊಟ್ಟಿದ್ದರು. ಪ್ರಸನ್ನ ಕುಮಾರ್ ಅವರ ವಾದ ಜಡ್ಜ್​ಗೆ ಹೆಚ್ಚು ಸಮಂಜಸ ಎನಿಸಿದೆ. ಹಾಗಾಗಿ ದರ್ಶನ್​ಗೆ ಜಾಮೀನು ನಿರಾಕರಿಸಲಾಗಿದೆ. ಇದರಿಂದ ದರ್ಶನ್​ ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ತೀವ್ರ ನಿರಾಸೆಯಾಗಿದೆ.

By Veeresh

Leave a Reply

Your email address will not be published. Required fields are marked *

Verified by MonsterInsights